ಹಿಂದುಳಿದ ವರ್ಗಗಳ ಹಾಸ್ಟೆಲ್‌ನಲ್ಲಿ ಶೇ.25ರಷ್ಟು ಹೆಚ್ಚು ಪ್ರವೇಶಾವಕಾಶ: ಕೋಟ ಶ್ರೀನಿವಾಸ ಪೂಜಾರಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸುವ ಉದ್ದೇಶದಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ.25ರಷ್ಟು ಪ್ರವೇಶಾವಕಾಶವನ್ನು ಹೆಚ್ಚಿಸಲಾಗುತ್ತಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ (ಸೆ.15): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸುವ ಉದ್ದೇಶದಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ.25ರಷ್ಟು ಪ್ರವೇಶಾವಕಾಶವನ್ನು ಹೆಚ್ಚಿಸಲಾಗುತ್ತಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರಿಂದ ಈವರೆಗೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇತಿಹಾಸದಲ್ಲೇ ಇದೊಂದು ಮಹತ್ವದ ಹೆಜ್ಜೆಯಾಗಿದ್ದು, ಸುಮಾರು 250 ಹೊಸ ವಿದ್ಯಾರ್ಥಿ ನಿಲಯಗಳನ್ನು ತೆರೆಯುವ ಆರ್ಥಿಕ ಹೊರೆಯನ್ನು ಇದರಿಂದ ತಪ್ಪಿಸಲಾಗಿದೆ ಎಂದು ಹೇಳಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಶೇ.25ರಷ್ಟು ಪ್ರವೇಶಾವಕಾಶ ಹೆಚ್ಚಿಸುವ ಹಾಗೂ ಇದರಿಂದ ಉಂಟಾಗುವ ಹೆಚ್ಚುವರಿ ವೆಚ್ಚವನ್ನು ವಿದ್ಯಾಸಿರಿ ಯೋಜನೆಗೆ ಒದಗಿಸುವ ಅನುದಾನದಿಂದ ಬಳಸಿಕೊಳ್ಳುವ ಇಲಾಖೆಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಈ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೇ ಅನುಷ್ಠಾನಗೊಳಿಸಲಾಗುವುದು ಎಂದು ವಿವರಿಸಿದ್ದಾರೆ.
ಉಡುಪಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅವಘಡ: ಸೂಕ್ತ ಕ್ರಮಕ್ಕೆ ಡಿಸಿ ಕೂರ್ಮಾರಾವ್ ಸೂಚನೆ
ಈ ಪ್ರಸ್ತಾವನೆಯ ಅನುಷ್ಠಾನಕ್ಕೆ 54.20 ಕೋಟಿ ರೂ. ಅನುದಾನ ಬೇಕಾಗಿದ್ದು, ತುರ್ತಾಗಿ 7.50 ಕೋಟಿ ರೂ ಅನುದಾನ ಒದಗಿಸುವಂತೆ ಹಾಗೂ ಸಂಖ್ಯಾಬಲ ಹೆಚ್ಚಳದ ಜೊತೆಯಲ್ಲಿಯೇ ಅಗತ್ಯವಿರುವ 190 ಅಡುಗೆಯವರು, 328 ಅಡುಗೆ ಸಹಾಯಕರು ಸೇರಿ ಒಟ್ಟು 518 ಹುದ್ದೆಗಳನ್ನು ಸೃಜಿಸಲು ಕೋರಲಾಗಿತ್ತು ಎಂದರು. ಇದೀಗ ಆರ್ಥಿಕ ಇಲಾಖೆ ಪ್ರಸ್ತಾವನೆಗೆ ಸಹಮತಿ ನೀಡಿರುವುದರಿಂದ ಅನುಷ್ಠಾನ ಕಾರ್ಯ ಶೀಘ್ರವೇ ಅಗಲಿದೆ ಎಂದು ತಿಳಿಸಿದ ಅವರು, ಈ ಪ್ರಸ್ತಾವನೆಯನ್ನು ಅನುಮೋದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಅಲ್ಪ ಪರಿಹಾರ ವಿತರಣೆಗೆ ಆಕ್ಷೇಪ: ಮಳೆಯಿಂದಾಗಿ ಮನೆ ಹಾನಿಯಾದ ಸಂತ್ರಸ್ತರಿಗೆ ಅಲ್ಪ ಪ್ರಮಾಣದಲ್ಲಿ ಹಾನಿ ಹಾಗೂ ಮಳೆನೀರು ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೇವಲ 5200 ವಿತರಣೆ ಮಾಡಿದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ಶನಿವಾರ ಸಚಿವ ಕೋಟ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ, ಪರಿಹಾರ ವಿತರಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಳೆನೀರು ಯಾವುದೇ ಮನೆಗಳಿಗೆ ನುಗ್ಗಿದರೆ 10 ಸಾವಿರ ಹಾಗೂ ಭಾಗಶಃ ಮನೆ ಹಾನಿಯಾದವರ ಖಾತೆಗೆ 50 ಸಾವಿರ ಹಾಕಬೇಕು. ಅತಿಕ್ರಮಣ ಜಾಗದಲ್ಲಿದ್ದ ಮನೆ ಹಾನಿಯಾದರೂ ಪರಿಹಾರ ವಿತರಿಸಬೇಕು.
ಜಾತಿ ಗೊತ್ತಿಲ್ಲದ ಮಕ್ಕಳಿಗೂ ಮೀಸಲಾತಿಗೆ ಶಿಫಾರಸು; ಕೆ.ಜಯಪ್ರಕಾಶ್ ಹೆಗ್ಡೆ
ಪರಿಹಾರ ಸರ್ಕಾರದಿಂದ ಕೊಡುವುದಾಗಿದೆ. ಹಾನಿಯಾದವರಿಗೆ ಸಿಕ್ಕ ಪರಿಹಾರದಿಂದ ಪುನರ್‌ವಸತಿ ಕಲ್ಪಿಸಿಕೊಳ್ಳಲು ಅನುಕೂಲವಾಗಬೇಕು. ಅಲ್ಪ ಮೊತ್ತದ ಪರಿಹಾರದಿಂದ ಹಾನಿಗೀಡಾದ ಮನೆಯನ್ನು ಅವರು ಹೇಗೆ ದುರಸ್ತಿ ಮಾಡಿಕೊಂಡಾರು ಎಂದು ಸಚಿವರು ಪ್ರಶ್ನಿಸಿದರು. ಪ್ರಕೃತಿ ವಿಕೋಪದಡಿ ಹಾನಿಯಾದರಿಗೆ ಪರಿಹಾರ ಕಲ್ಪಿಸುವುದಕ್ಕಾಗಿಯೇ ಪ್ರತಿ ತಾಲೂಕಿನ ತಹಶೀಲ್ದಾರ್ ಖಾತೆಗೆ 50 ಲಕ್ಷ ನೀಡಲಾಗಿದೆ. ಯಾರಿಗೆ ಕಡಿಮೆ ಮೊತ್ತದ ಪರಿಹಾರ ನೀಡಿದ್ದೀರೋ ಅಂತಹವರ ಖಾತೆಗೆ ಸಂಜೆಯೊಳಗೆ ಹೆಚ್ಚಿನ ಪರಿಹಾರ ಜಮಾ ಮಾಡಬೇಕೆಂದು ತಹಶೀಲ್ದಾರರಿಗೆ ತಾಕೀತು ಮಾಡಿದರು. ಕಾಳಜಿ ಕೇಂದ್ರದಿಂದ ಜನರು ಮನೆಗೆ ತೆರಳುವಾಗ ಕಿಟ್ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.