ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಿಂದ ದರ್ಶನ ಮುಗಿಸಿ ವಾಪಸ್ ಬರುವಾಗ ರಕ್ಷಿತ್‌ಗೆ ಎದೆ ನೋವು ಕಾಣಿಸಿಕೊಂಡಿದೆ. ದೇವಸ್ಥಾನದ ಹೊರಭಾಗದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಯುವಕ.

ಮೈಸೂರು(ಜು.27):  ಚಾಮುಂಡೇಶ್ವರಿ ದೇವಿ ದರ್ಶನಕ್ಕೆಂದು ಬಂದಿದ್ದ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು(ಶನಿವಾರ) ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ರಕ್ಷಿತ್ (27) ಮೃತ ಯುವಕ.

ಇಂದು ವರ್ಧಂತಿ ಹಿನ್ನಲೆಯಲ್ಲಿ ರಕ್ಷಿತ್‌ ಚಾಮುಂಡೇಶ್ವರಿ ದರ್ಶನಕ್ಕೆ ಬಂದಿದ್ದನು. ರಕ್ಷಿತ್ ಸ್ನೇಹಿತರ ಜೊತೆ ದರ್ಶನಕ್ಕೆ ಬಂದಿದ್ದ. 

ವಿಜಯಪುರ: ಹೃದಯಾಘಾತದಿಂದ ಪೈಲ್ವಾನ್ ಶ್ರೀಕಾಂತ್‌ ನಾಯಕ್ ಸಾವು

ದೇವಸ್ಥಾನದಿಂದ ದರ್ಶನ ಮುಗಿಸಿ ವಾಪಸ್ ಬರುವಾಗ ರಕ್ಷಿತ್‌ಗೆ ಎದೆ ನೋವು ಕಾಣಿಸಿಕೊಂಡಿದೆ. ದೇವಸ್ಥಾನದ ಹೊರಭಾಗದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆ.ಆರ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.