Asianet Suvarna News Asianet Suvarna News

ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಲಾರಿಗೆ ಸ್ಕೂಟರ್‌ ಡಿಕ್ಕಿ: ಯುವತಿ ಸಾವು

ಮೃತರನ್ನು ಸ್ಥಳೀಯ ಕರೇನಹಳ್ಳಿಯ ನಿವಾಸಿ ನಂದಿನಿ ಎಂದು ಗುರುತಿಸಲಾಗಿದೆ. ಅವರು ತಮ್ಮ ಸಂಬಂಧಿಯ ಮಗು ಹಾಗೂ ಹಿರಿಯ ಸಂಬಂಧಿಯೊಬ್ಬರನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಮತ್ತೋರ್ವ ಮಹಿಳೆ ಸಣ್ಣಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

28 Year Old Young Woman Dies Due to Road Accident in Bengaluru grg
Author
First Published Sep 10, 2023, 4:15 AM IST

ದೊಡ್ಡಬಳ್ಳಾಪುರ(ಸೆ.10): ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಎದುರಿನಿಂದ ಬಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಸ್ಥಳೀಯ ಕರೇನಹಳ್ಳಿಯ ನಿವಾಸಿ ನಂದಿನಿ(28) ಎಂದು ಗುರುತಿಸಲಾಗಿದೆ. ಅವರು ತಮ್ಮ ಸಂಬಂಧಿಯ ಮಗು ಹಾಗೂ ಹಿರಿಯ ಸಂಬಂಧಿಯೊಬ್ಬರನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಮತ್ತೋರ್ವ ಮಹಿಳೆ ಸಣ್ಣಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಥಣಿ: ರಸ್ತೆ ಅಪಘಾತ, ರಜೆಗೆ ಬಂದಿದ್ದ ಯೋಧ ಸಾವು

ಅವರು ಕೊಂಗಾಡಿಯಪ್ಪ ಕಾಲೇಜು ಕಡೆಯಿಂದ ನಂಜುಂಡೇಶ್ವರ ಕಲ್ಯಾಣ ಮಂದಿರ ಸಮೀಪ ಬರುತ್ತಿದ್ದ ವೇಳೆ ರಸ್ತೆಬದಿಯ ಕಸದ ರಾಶಿ ಕಡೆಯಿಂದ ನಾಯಿಯೊಂದು ರಸ್ತೆಗೆ ಓಡಿ ಬಂದಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಯುವತಿ ನಾಯಿಯನ್ನು ಅಪಘಾತದಿಂದ ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಯುವತಿ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ಸ್ಥಳೀಯರು ಯುವತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ… ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದಿ ನಾಯಿಗಳ ಹಾವಳಿಯೂ ಕಾರಣ:

ರಸ್ತೆ ಪಕ್ಕದಲ್ಲಿ ಕಸದ ರಾಶಿ, ತ್ಯಾಜ್ಯ ಅಮರ್ಪಕ ನಿರ್ವಹಣೆ ಪರಿಣಾಮ ಬೀದಿ ನಾಯಿಗಳ ಸಂಖ್ಯೆ ಮಿತಿ ಮೀರಿ ಹೆಚ್ಚಳವಾಗಿದ್ದು, ಇದರಿಂದಲೂ ಅಪಘಾತಗಳ ಸಂಖ್ಯೆ ಹೆಚ್ಚಿದೆ ಎನ್ನುವುದು ಸ್ಥಳೀಯರ ಆರೋಪವಾಗಿದೆ. ನಗರಸಭೆ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಮಾಡದಿರುವುದು ಖಂಡನೀಯ. ದೊಡ್ಡ ನಗರವಾಗಿದ್ದರೂ ಮೂಲಸೌಕರ್ಯಗಳ ಕೊರತೆ ಕಾಡುತ್ತಿದೆ. ನಗರಸಭೆ ಮಾತ್ರ ಗಾಢನಿದ್ರೆಯಲ್ಲಿದೆ. ಕೂಡಲೇ ರಸ್ತೆ ಬದಿಗಳಲ್ಲಿನ ಕಸದ ರಾಶಿಗಳಿಗೆ ಮುಕ್ತಿ ಕಾಣಿಸಬೇಕು. ಸೂಕ್ತ ಕಸದ ತೊಟ್ಟಿಗಳ ವ್ಯವಸ್ಥೆ ಮಾಡಬೇಕು. ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂಬ ಹಕ್ಕೊತ್ತಾಯ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

Follow Us:
Download App:
  • android
  • ios