ಮಂಡ್ಯದಲ್ಲಿ ಬಿಸಿಯೂಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 29 ವಿದ್ಯಾರ್ಥಿಗಳು ವಾಂತಿ-ಬೇಧಿಯಿಂದ  ಅಸ್ವಸ್ಥಗೊಂಡಿದ್ದಾರೆ. 

29 students hospitalized after consuming Midday Meal  In School at Mandya rbj

ಮಂಡ್ಯ, (ಸೆಪ್ಟೆಂಬರ್. 16): ಹಲ್ಲಿ ಬಿದ್ದ ಬಿಸಿಯೂಟವನ್ನು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಅಂಬರಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

 ಅಂಬರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಹಲ್ಲಿಬಿದ್ದ ಬಿಸಿಯೂಟ ಸೇವಿಸಿದ 29 ವಿದ್ಯಾರ್ಥಿಗಳು ವಾಂತಿ-ಬೇಧಿಯಿಂದ  ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ವಿದ್ಯಾರ್ಥಿಗಳಿಗೆ ಮಿಮ್ಸ್ ಮಕ್ಕಳ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಸರ್ಕಾರಿ ಶಾಲೆಗಳಲ್ಲಿ ಪದೇ-ಪದೇ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ. ಆದ್ರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತ್ರ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ.ಹಲವು ಕಡೆ ಶಾಲೆಗಳಲ್ಲಿ ಬಿಸಿಯೂಟದ ಕೊಠಡಿ ಅವ್ಯಸ್ತೆಯಿಂದ ಕೂಡಿದ್ದಾವೆ. ಸರಿಯಾಗಿ ಸ್ವಚ್ಛತೆ ಇಲ್ಲ ಏನಿಲ್ಲ. ಇನ್ನು ಅಡುಗೆ ಸಹಾಯಕರು ಸಹ ಆಹಾರ ತಯಾರಿಸುವಾಗ ಯಾವುದೇ ಸ್ವಚ್ಛತಾ ಕ್ರಮಗಳನ್ನು ಅನುಸರಿಸುತ್ತಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಲೇ ಇವೆ.

Latest Videos
Follow Us:
Download App:
  • android
  • ios