ಬೆಳಗಾವಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 3.5 ಕೋಟಿ ಹಣ ವಶ
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಬಸ್ ಮೂಲಕ ಸಾಗಿಸುತ್ತಿದ್ದ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದ ಮುಂಬೈ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಪರಿಶೀಲನೆ ನಡೆಸಿದಾಗ ಈ ಹಣ ಪತ್ತೆಯಾಗಿದೆ.
ಬೆಳಗಾವಿ(ಏ.07): ರಾಜ್ಯ ವಿಧಾನ ಸಭೆಗೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದರೂ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ಹಣವನ್ನು ವಶಪಡಿಸಿಕೊಂಡ 24 ಗಂಟೆಗಳಲ್ಲಿಯೇ ಮತ್ತೆ ಬೆಳಗಾವಿಯಲ್ಲಿ 1.59 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿಪ್ಪಾಣಿ ಹಾಗೂ ಬೆಳಗಾವಿ ನಗರದಲ್ಲಿ ಸೂಕ್ತ ದಾಖಲೆಗಳಿಲ್ಲದೆ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿ ಅವರಿಂದ 1.59 ಕೋಟಿ ಹಣ ವಶಪಡಿಸಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಬಸ್ ಮೂಲಕ ಸಾಗಿಸುತ್ತಿದ್ದ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದ ಮುಂಬೈ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಪರಿಶೀಲನೆ ನಡೆಸಿದಾಗ ಈ ಹಣ ಪತ್ತೆಯಾಗಿದೆ. ಹೆಚ್ಚಿನ ತನಿಖೆಗಾಗಿ ಹಣದ ಜೊತೆಗೆ ಓರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ರಾತ್ರಿ 12 ಗಂಟೆ ಸುಮಾರಿಗೆ ಮುಂಬೈನಿಂದ ಬರುತ್ತಿದ್ದ ಖಾಸಗಿ ಬಸ್ ನಿಪ್ಪಾಣಿ ತಾಲೂಕಿನ ಕೊಗನಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ . 1.5 ಕೋಟಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಲೋಪ: ಏಳು ಶಿಕ್ಷಕರ ಅಮಾನತು
ಇನ್ನೂ ಬೆಳಗಾವಿ ನಗರದ ಅಲಾರವಾಡ ಬ್ರೀಡ್ಜ್ ಬಳಿ ಸ್ಥಾಪಿಸಲಾಗಿರುವ ಧಾರವಾಡ ನಾಕಾ ಚೆಕ್‌ಪೋಸ್ಟ್ ಬಳಿ ಕಾರನಲ್ಲಿ ದಾಖಲೆ ಇಲ್ಲದೆ .4.18 ಲಕ್ಷ ಹಣ ಸಾಗಾಟ ಮಾಡುತ್ತಿದ್ದ ವೇಳೆ ಹಣದ ಸಮೇತ ವ್ಯಕ್ತಿಯನ್ನು ವಶಪಡಿಸಿಕೊಂಡಿದ್ದಾರೆ. ನಗರ ಪ್ರವೇಶ ಮಾಡುತ್ತಿದ್ದ ಕಾರನ್ನು ತಡೆದ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರನಲ್ಲಿ ಹಣ ಪತ್ತೆಯಾಗಿದ್ದು, ಈ ಕುರಿತು ವಿಚಾರಿಸಿದ್ದಾರೆ. ಈ ಸಮಯದಲ್ಲಿ ಸಮರ್ಪಕ ಮಾಹಿತಿ ಹಾಗೂ ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ಹಣ ಹಾಗೂ ಹಣ ತೆಗದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಶಹಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.