ಬೆಂಗಳೂರು [ನ.27] : ಯಶವಂತಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಬಿಬಿಎಂಪಿ ಕಾಂಗ್ರೆಸ್ ಸದಸ್ಯರಾದ ರಾಜಣ್ಣ, ಆರ್ಯ ಶ್ರೀನಿವಾಸ್ ಹಾಗೂ ಪಟೇಲ್ ರಾಜು ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕಾಂಗ್ರೆಸ್ ಆದೇಶಿಸಿದೆ.

ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಸದಸ್ಯರಾದ ಹೇರೋಹಳ್ಳಿ ವಾರ್ಡ್‌ನ ರಾಜಣ್ಣ, ಹೆಮ್ಮಿಗೆಪುರ ವಾರ್ಡ್‌ನ ಆರ್ಯ ಶ್ರೀನಿವಾಸ್ ಹಾಗೂ ಬಿಳೆಕಹಳ್ಳಿ ವಾರ್ಡ್‌ನ ಪಟೇಲ್ ರಾಜು ಅವರು ಪಕ್ಷದ ಅಭ್ಯರ್ಥಿ ಪಿ.ನಾಗರಾಜ್ ವಿರುದ್ಧ ಹಾಗೂ ವಿರೋಧ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದರಿಂದ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಷಫಿಉಲ್ಲಾ ಆದೇಶದಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಜೆಪಿಗೆ ಬೆಂಬಲ ನೀಡುತ್ತೇನೆ: ಈ ಬಗ್ಗೆ ಪ್ರತಿಕ್ರಿಯಿಸಿ ರುವ ಉಚ್ಚಾಟಿತ ಕಾಂಗ್ರೆಸ್ ಕಾರ್ಪೊರೇಟರ್ ರಾಜಣ್ಣ, ನನ್ನ ವಾರ್ಡ್‌ನ ಅಭಿವೃದ್ಧಿಯೇ ನನಗೆ ಮುಖ್ಯ. ಹೀಗಾ ಗಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಬೆಂಬ ಲಿಸಿದ್ದೇನೆ. ಉಚ್ಚಾಟನೆ ಮಾಡಿದ್ದರೂ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನನ್ನು ಉಚ್ಚಾಟಿಸಿರುವ ಕಾಂಗ್ರೆಸ್ ಪಕ್ಷದ ತೀರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ ಎಂದರು.