Asianet Suvarna News Asianet Suvarna News

Chikkamagaluru: ಶಾಸಕರೇ ಉದ್ಘಾಟಿಸಬೇಕೆಂದು ಬೀಗ ಹಾಕಿದ್ದ 3 ಕೋಟಿಯ ಕಾಂಕ್ರೀಟ್ ರಸ್ತೆ ಢಮಾರ್!

ಮೂರು ಕೋಟಿ  ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆಯನ್ನು ಕಳಪೆಯಾಗಿ ನಿರ್ಮಿಸಿರುವುದರಿಂದ ಜನಸಂಚಾರಕ್ಕೆ ಮುಕ್ತಗೊಂಡ ಕೆಲವೇ ದಿನಗಳಲ್ಲಿ ದುಸ್ಥಿತಿಗೆ ತಲುಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ನಡೆದಿದೆ. 

3 crore concrete road which was locked to be inaugurated by MLA in Chikkamagaluru has been damaged gvd
Author
First Published Jan 30, 2023, 10:27 PM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಜ.30): ಮೂರು ಕೋಟಿ  ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆಯನ್ನು ಕಳಪೆಯಾಗಿ ನಿರ್ಮಿಸಿರುವುದರಿಂದ ಜನಸಂಚಾರಕ್ಕೆ ಮುಕ್ತಗೊಂಡ ಕೆಲವೇ ದಿನಗಳಲ್ಲಿ ದುಸ್ಥಿತಿಗೆ ತಲುಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ನಡೆದಿದೆ. 

ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕವನಹಳ್ಳ, ಮಾವಿನಹೊಲ, ಮಣ್ಣಿನಪಾಲ್ ಗ್ರಾಮಗಳು ನಕ್ಸಲ್ ಪೀಡಿತ ಗ್ರಾಮಗಳಾಗಿದ್ದು, ಈ ಗ್ರಾಮಗಳಿಗೆ ಹೊರನಾಡು ಗ್ರಾಮದಿಂದ ಸಂಪರ್ಕ ಕಲ್ಪಿಸುವ ಸುಮಾರು 3 ಕಿಮೀ ಉದ್ದದ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದರಿಂದ ಗ್ರಾಮಸ್ಥರು ರಸ್ತೆ ದುರಸ್ತಿಗೆ ಒತ್ತಾಯಿಸಿ ಹೊರನಾಡು ಗ್ರಾಮ ಪಂಚಾಯತ್ ಹಾಗೂ ಕ್ಷೇತ್ರದ ಶಾಸಕ ಕುಮಾರಸ್ವಾಮಿ ಅವರಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರು.ಮನವಿ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಕಳೆದ ವರ್ಷ ಜನವರಿ ತಿಂಗಳಲ್ಲಿ ಈ ರಸ್ತೆಯ ಅಭಿವೃದ್ಧಿಗಾಗಿ ಅನುದಾನ ನೀಡಿದ್ದರು. 

Chikkamagaluru: ಮಾಸಿಕ ಪೆನ್ಷನ್ ಜಾರಿಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ನಕ್ಸಲ್ ಪೀಡಿತ ಪ್ರದೇಶದ ರಸ್ತೆ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ: ಇನ್ನು ಅಧಿಕಾರಿಗಳು, ಜನನಾಯಕರು, ಕಂಟ್ರಾಕ್ಟರ್ಗಳಿಗೆ ಈ ದಾರಿ ಕೇವಲ ದಾರಿಯಷ್ಟೆ. ಆದರೆ, ನಕ್ಸಲ್ ಪೀಡಿತ ಪ್ರದೇಶದ ಮಾವಿನಹೋಲ ಸೇರಿದಂತೆ ಮಣ್ಣಿನಪಾಲ್, ಹೊರನಾಡು ಸೇರಿದಂತೆ ಹತ್ತಾರು ಹಳ್ಳಿಗಳಿಗೆ ಈ ದಾರಿ ಬದುಕಿನ ಅವಿಭಾಜ್ಯ ಅಂಗ. ನಕ್ಸಲ್ ಪೀಡಿತ ಪ್ರದೇಶದ ರಸ್ತೆಯಲ್ಲಿ ನಡೆದಿರುವ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಹೊರನಾಡು ಗ್ರಾಮದಿಂದ ಮಾವಿನಹೊಲ, ಮಣ್ಣಿನಪಾಲ್, ಕವನಹಳ್ಳ ಗ್ರಾಮಗಳವರೆಗಿನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ಗುತ್ತಿಗೆದಾರರೊಬ್ಬರಿಗೆ ಗುತ್ತಿಗೆ ನೀಡಲಾಗಿತ್ತು. ಈ ಗುತ್ತಿಗೆದಾರರು ಜವವರಿಯಿಂದ ಮೇ ತಿಂಗಳವರೆಗೆ ಕಾಮಗಾರಿ ನಡೆಸಿ ಕಾಮಗಾರಿಯನ್ನು ಪೂರ್ಣಗೊಳಿಸಿದ್ದರು.

ಮೂರು ಕಿ.ಮೀ. ಕಾಂಕ್ರೀಟ್ ರಸ್ತೆ ಸಂಪೂರ್ಣ ಕಳಪೆ: ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ಬಿಜೆಪಿ ಮುಖಂಡರು ಸ್ಥಳೀಯರಿಗೆ ಈ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡದೇ ಬ್ಯಾರಿಕೇಡ್ಗಳನ್ನು ಅಡ್ಡ ಇಟ್ಟು ಸಂಚಾರಕ್ಕೆ ತೊಂದರೆ ಮಾಡಿದ್ದರು. ಈ ರಸ್ತೆ ಉದ್ಘಾಟನೆಗೆ ಶಾಸಕ ಕುಮಾರಸ್ವಾಮಿಯೇ ಬರಬೇಕು ಎಂದು ಐದು ತಿಂಗಳು ರಸ್ತೆಗೆ ಬಂಡೆ ಅಡ್ಡ ಇಟ್ಟು, ಬೇಲಿ ಹಾಕಿ ಬೀಗ ಹಾಕಿದ್ರು. ನಂತರ ಜನರ ಆಕ್ರೋಶದಿಂದಾಗಿ ರಸ್ತೆಗೆ ಅಡ್ಡ ಇಡಲಾಗಿದ್ದ ಬ್ಯಾರಿಕೇಡ್ ತೆರವು ಮಾಡಲಾಗಿತ್ತು. ಇತ್ತೀಚೆಗೆ ಈ ರಸ್ತೆ ಗ್ರಾಮಸ್ಥರು ಹಾಗೂ ವಾಹನಗಳ ಸಂಚಾರಕ್ಕೆ ಮುಕ್ತಗೊಂಡಿದ್ದು, ಸಂಚಾರಕ್ಕೆ ಮುಕ್ತಗೊಂಡ ಕೆಲವೇ ದಿನಗಳಲ್ಲಿ ಕಾಂಕ್ರೀಟ್ ರಸ್ತೆಯ ಗುಣಮಟ್ಟ ಜಗಜ್ಜಾಹೀರಾಗುತ್ತಿದೆ. 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 37 ಸಾವಿರ ರೈತರಿಗಿಲ್ಲ ಪಿಎಂ ಕಿಸಾನ್‌ ನಿಧಿ!

ರಸ್ತೆಯನ್ನು ಅತ್ಯಂತ ಕಳಪೆಯಾಗಿ ನಿರ್ಮಿಸಿರುವುದರಿಂದ ರಸ್ತೆಗೆ ಹಾಕಿರುವ ಕಾಂಕ್ರೀಟ್ ಬರೀಗೈಲಿ ಕಿತ್ತು ಬರುತ್ತಿದೆ. ರಸ್ತೆಯುದ್ದಕ್ಕೂ ಕಾಂಕ್ರೀಟ್ಗೆ ಬಳಸಿದ್ದ ಜಲ್ಲಿಕಲ್ಲುಗಳ ರಾಶಿ ಬಿದ್ದಿದ್ದು, ರಸ್ತೆ ಅಲ್ಲಲ್ಲಿ ಗುಂಡಿ ಬಿದ್ದಿದೆ. ಇದರಿಂದಾಗಿ ಗ್ರಾಮಸ್ಥರ ಸಂಚಾರಕ್ಕೂ ತೊಂದರೆಯಾಗಿದ್ದು, ಮೂರೂವರೆ ಕೋಟಿ. ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಅಸಲಿಯತ್ತಿನ ಬಗ್ಗೆ ಗ್ರಾಮಸ್ಥರು ಮತ್ತೆ ಕ್ಷೇತ್ರದ ಶಾಸಕ ಕುಮಾರಸ್ವಾಮಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios