Asianet Suvarna News Asianet Suvarna News

ಮೂರು ದಿನ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

  • ಮಹಾಲಯ ಅಮಾವಸೆ ಹಾಗೂ ದಸರಾ ಮಹೋತ್ಸವ ಉದ್ಘಾಟನೆ ಹಿನ್ನೆಲೆ
  • ಮೈಸೂರಿನ ಚಾಮುಂಡಿಬೆಟ್ಟಕ್ಕೆ ಅ.5ರ ಬೆಳಗಿನ ಜಾವ 4 ರಿಂದ ಅ.7ರ ಮಧ್ಯಾಹ್ನದವರೆಗೂ ಸಾರ್ವಜನಿಕರು ಹಾಗೂ ಭಕ್ತಾದಿಗಳ ಪ್ರವೇಶ, ಸಾರ್ವಜನಿಕರ ವಾಹನಗಳ ಪ್ರವೇಶ ನಿರ್ಬಂಧ
3 days Devotees Entry Restricted To chamundi hill snr
Author
Bengaluru, First Published Oct 5, 2021, 12:58 PM IST
  • Facebook
  • Twitter
  • Whatsapp

 ಮೈಸೂರು(ಅ.05):  ಮಹಾಲಯ ಅಮಾವಸೆ  ಹಾಗೂ ದಸರಾ ಮಹೋತ್ಸವ (Dasara Festival) ಉದ್ಘಾಟನೆ ಹಿನ್ನೆಲೆಯಲ್ಲಿ ಮೈಸೂರಿನ (Mysuru) ಚಾಮುಂಡಿಬೆಟ್ಟಕ್ಕೆ (Chamundi Hill) ಅ.5ರ ಬೆಳಗಿನ ಜಾವ 4 ರಿಂದ ಅ.7ರ ಮಧ್ಯಾಹ್ನದವರೆಗೂ ಸಾರ್ವಜನಿಕರು ಹಾಗೂ ಭಕ್ತಾದಿಗಳ ಪ್ರವೇಶ, ಸಾರ್ವಜನಿಕರ ವಾಹನಗಳ ಪ್ರವೇಶವನ್ನು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ (DC Bagadi Goutham) ಅವರು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ಅ.6 ರಂದು ಮಹಾಲಯ ಅಮಾವಸೆ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದು, ಅ.7 ರಂದು ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ಪೊಲೀಸರು ಭದ್ರತಾ ಕ್ರಮವನ್ನು ಕೈಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ವಿಧಿಸಲಾಗಿದೆ.

ದಸರಾಗೆ ವಿದ್ಯುತ್‌ ಬೆಳಕಿನ ಸಿಂಗಾರ...! 100 ಕಿ.ಮಿ ದೀಪಾಲಂಕಾರ

ಈ ನಿರ್ಬಂಧಿತ ಅವಧಿಯಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ (Chamundeshwari Temple) ನಡೆದು ಬಂದಿರುವ ರೂಢಿ ಸಂಪ್ರದಾಯದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಅಧಿಕಾರಿಗಳು, ಅರ್ಚಕರು, ಸಿಬ್ಬಂದಿ ಮಾತ್ರ ನಡೆಸಲು ಅನುಮತಿಸಿದೆ. ಮೆಟ್ಟಿಲು ಮಾರ್ಗವಾಗಿ ಭಕ್ತರು, ಸಾರ್ವಜನಿಕರು ಬೆಟ್ಟಕ್ಕೆ ಬರುವುದು, ದಾನಿಗಳಿಂದ ದಾಸೋಹ ವ್ಯವಸ್ಥೆ ನಿಷೇಧಿಸಿದೆ.

ಸರ್ಕಾರಿ ವಾಹನಗಳು, ಚಾಮುಂಡಿಬೆಟ್ಟದ ಗ್ರಾಮಸ್ಥ ವಾಹನಗಳು, ತುರ್ತು ಸೇವಾ ವಾಹನಗಳು, ದಸರಾ ಕಾರ್ಯಕ್ರಮ ಅಗತ್ಯ ಸಾಮಾಗ್ರಿ ಸಾಗಿಸುವ ವಾಹನಗಳನ್ನು ಹೊರತುಪಡಿಸಿ ಇತರೆ ಸಾರ್ವಜನಿಕರು ಹಾಗೂ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದಸರಾ ಹಬ್ಬಕ್ಕೆ ಇನ್ನೆರಡೇ ದಿನ

 

ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವ ಆರಂಭಕ್ಕೆ ಇನ್ನೆರಡೇ ದಿನ ಬಾಕಿ ಇದೆ. ಅ.7 ರಿಂದ ದಸರಾ ಆರಂಭವಾಗಲಿದ್ದು, ಉದ್ಘಾಟನೆ ಹಾಗೂ ಜಂಬೂ ಸವಾರಿ- ಎರಡಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಭಾಗವಹಿಸುವರು. ಮೊದಲ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಕಾಲಕ್ಕೆ ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿಯನ್ನು ಪ್ರದಾನ ಮಾಡುವರು.

ಕಳೆದ ಬಾರಿಯಂತೆ ಈ ಬಾರಿ ಕೂಡ ಕೋವಿಡ್‌-19 (Covid 19)ಕಾರಣದಿಂದಾಗಿ ದಸರೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆ, ಅರಮನೆ (palace) ಅಂಗಳದಲ್ಲಿ ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ಕೊನೆಯ ದಿನ ಅರಮನೆ ಒಳಾವರಣಕ್ಕೆ ಸೀಮಿತವಾಗಿ ಜಂಬೂಸವಾರಿ ನಡೆಯಲಿದೆ. ಆದರೆ ನಗರದಾದ್ಯಂತ ದೀಪಾಲಂಕಾರ (Lightings) ಇರುತ್ತದೆ.

ಅ.7ರಂದು ಚಾಮುಂಡಿಬೆಟ್ಟದಲ್ಲಿ (Chamundibetta) ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15 ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ನಾಡಹಬ್ಬ ದಸರೆಗೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ (SM Krishna) ಚಾಲನೆ ನೀಡುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ರಾಜೀವ್‌ ಚಂದ್ರಶೇಖರ್‌, ಶೋಭಾ ಕರಂದ್ಲಾಜೆ. ಎ.ನಾರಾಯಣಸ್ವಾಮಿ ಉಪಸ್ಥಿತರಿರುವರು.

Follow Us:
Download App:
  • android
  • ios