ಅಡ್ಡ ಬಂದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಬುಧವಾರ ದೇವನಹಳ್ಳಿಯಲ್ಲಿ ಸಂಭವಿಸಿದೆ.
ಬೆಂಗಳೂರು, [ಜೂ.26]: ಅಡ್ಡ ಬಂದ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರು ಗ್ರಾಮಾಮತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಅಪಘಾತ ನಡೆದಿದೆ. ಮೃತ ಗುರುತು ಪತ್ತೆಯಾಗಿಲ್ಲ.
ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ದೇವನಹಳ್ಳಿ ವಿಮಾನ ನಿಲ್ದಾಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
