ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಭೀಕರ ಅಪಘಾತ| ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜು| ಸ್ಥಳದಲ್ಲಿಯೇ ಮೂವರು ಸಾವು| ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಗ್ರಾಮದ ಬಳಿ ಈ ಅವಘಡ.
ಧಾರವಾಡ, [ಅ.03]: ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ ಕೂಡ ಉರುಳಿಬಿದ್ದಿದೆ.
ಕಾರು ಆಂಧ್ರ ಪ್ರದೇಶದ ಮೂಲದ್ದಾಗಿದ್ದು, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
