Asianet Suvarna News Asianet Suvarna News

ಆದಿಚುಂಚನಗಿರಿ ಶ್ರೀ ಭೇಟಿ ಮಾಡಿದ ಅನರ್ಹ ಶಾಸಕರು

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜ್‌ ಮತ್ತು ಅನರ್ಹಗೊಂಡ ಶಾಸಕ ಮುನಿರತ್ನ ಅವರು ಆದಿಚುಂಚನಗಿರಿ ಮಠ ಹಾಗೂ ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

3 Disqualified MLAs Meet Adichunchanagiri Sri
Author
Bengaluru, First Published Nov 17, 2019, 8:02 AM IST

ಬೆಂಗಳೂರು [ನ.17]:  ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜ್‌ ಮತ್ತು ಅನರ್ಹಗೊಂಡ ಶಾಸಕ ಮುನಿರತ್ನ ಅವರು ಆದಿಚುಂಚನಗಿರಿ ಮಠ ಹಾಗೂ ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬೆಳಗ್ಗೆ ವಿಜಯನಗರದಲ್ಲಿನ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜ್‌, ಮುನಿರತ್ನ ಅವರು ಭೇಟಿ ಮಾಡಿದರು. ಸೋಮಶೇಖರ್‌ ಮತ್ತು ಬೈರತಿ ಬಸವರಾಜ್‌ ಅವರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ತರುವಾಯ ಮೂವರು ಮುಖಂಡರು ಜಯನಗರದಲ್ಲಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸ್ವಾಮೀಜಿಗಳ ಭೇಟಿ ಬಳಿಕ ಡಾಲರ್ಸ್‌ ಕಾಲೋನಿಯಲ್ಲಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿ ಭೇಟಿ ಮಾಡಿ ರಾಜಕೀಯ ಬೆಳವಣಿಗೆ ಕುರಿತು ಸಮಾಲೋಚನೆ ನಡೆಸಿದರು. ಕ್ಷೇತ್ರದಲ್ಲಿ ಉಂಟಾಗಿರುವ ಬಂಡಾಯ ಕುರಿತು ಚರ್ಚಿಸಿದರು. ಈ ವೇಳೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು. ಸ್ಥಳೀಯ ಮುಖಂಡರ ಮನವೊಲಿಕೆ ಕಾರ್ಯವನ್ನು ಉಸ್ತುವಾರಿಗಳು ಮಾಡಲಿದ್ದಾರೆ. ಯಾವುದೇ ಚಿಂತೆ ಮಾಡಬೇಕಾದ ಅಗತ್ಯ ಇಲ್ಲ ಎಂದು ಯಡಿಯೂರಪ್ಪ ಅವರು ಅಭಯ ನೀಡಿದರು.

ಆದಿಚುಂಚನಗಿರಿ ಸ್ವಾಮೀಜಿ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಸ್‌.ಟಿ.ಸೋಮಶೇಖರ್‌, ಚುನಾವಣೆಗೆ ನಾಮಪತ್ರ ಸಲ್ಲಿಸುವ ಮೊದಲು ಆದಿಚುಂಚನಗಿರಿ ಮಠಕ್ಕೆ ಬೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದರು.

Follow Us:
Download App:
  • android
  • ios