ಹಾಸನ, ಚಿಕ್ಕಬಳ್ಳಾಪುರಕ್ಕೆ ಹೊಸ ಜಿಲ್ಲಾಧಿಕಾರಿಗಳು
ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಧಿಕಾರಿ ವರ್ಗಾವಣೆ ಮಾಡದಂತೆ ಕೆಲ ದಿನಗಳ ಹಿಂದೆ ಭಾರೀ ಪ್ರತಿಭಟನೆ ನಡೆದಿತ್ತು. ಇದರ ನಡುವೆಯೂ ಹಾಸನ ಹಾಗೂ ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಹಾಸನ [ಆ.28]: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಹಣಾ ನಿರ್ದೇಶಕರಾಗಿದ್ದ ಆರ್. ಗಿರೀಶ್ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾಗಿದ್ದ ಆರ್.ಲತಾ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಮಾಡಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಹಿಂದಿನ ವರ್ಗಾವಣೆ ಆದೇಶ ಮಾರ್ಪಡಿಸಿ ಕೆ.ಎನ್. ರಮೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆ) ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ-3 ಹುದ್ದೆಯಲ್ಲಿ ಮುಂದುವರೆಸಲಾಗಿದೆ.