ಕೊಡಗು, [ಮೇ.19] : ವಿದ್ಯುತ್ ಸ್ಪರ್ಶಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಂದು [ಭಾನುವಾರ] ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ. 

ತಮ್ಮಯ್ಯ, ಅನಿಲ್ ಹಾಗೂ ಕವಿತಾ ಮೃತ ದುರ್ದೈವಿಗಳು.   ಮಡಿಕೇರಿ ತಾಲೂಕಿನ ದೊಡ್ಡಪುಲಿಕೋಟು ಗ್ರಾಮದ ಕೆ.ಸುರೇಶ್ ಎಂಬವವರ ಕಾಫಿ ತೋಟದಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ, ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿ ಈ ದುರ್ಘಟನೆ ಸಂಭವಿಸಿದೆ. 

ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದರೆ, ಕವಿತಾ ಎಂಬುವವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು, ಸುನಿತಾ(32) ಎಂಬವವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.