ರಾಣಿಬೆನ್ನೂರು(ಡಿ.05): ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕಮದೋಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಘಟನೆಯಲ್ಲಿ ಹರಿಹರ ತಾಲೂಕು ಕುಂಬಳೂರ ಗ್ರಾಮದ ಹನುಮಂತಪ್ಪ ಕೆ.(65), ಡಿ.ವೈ. ಶಿವಾನಿ(15) ಹಾಗೂ ರಾಜೇಶ್ವರಿ (45) ಮೃತಪಟ್ಟವರು.

ಹಾವೇರಿ: ಟ್ರ್ಯಾಕ್ಟರ್‌ ಪಲ್ಟಿ, ಬಿಹಾರದ ಇಬ್ಬರು ಕಾರ್ಮಿಕರ ದುರ್ಮರಣ

ಮೃತರು ಕಾರಿನಲ್ಲಿ ಹುಬ್ಬಳ್ಳಿಯಿಂದ ತಮ್ಮ ಸ್ವಗ್ರಾಮಕ್ಕೆ ತೆರಳುವ ವೇಳೆ ಎದುರಿನಲ್ಲಿ ರಸ್ತೆ ಬದಿ ನಿಂತುಕೊಂಡಿದ್ದ ಕಂಟೈನರ್‌ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಲಗೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.