ಮಂಡ್ಯ , [ಜೂನ್. 12]: ಅಪಘಾತಗೊಂಡವರನ್ನ ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಣಿಗೆರೆ ಬಳಿ ಸಂಭವಿಸಿದೆ.

ಮೊದಲಿಗೆ ಮಳವಳ್ಳಿಯಿಂದ ಕೆಎಂ ದೊಡ್ಡಿ ಕಡೆಗೆ ಹೋಗುತ್ತಿದ್ದ ಕಾರು  ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರನ್ನು ರಕ್ಷಿಸಲು ಹೋಗಿದ್ದ ಮೂವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.

ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರನ್ನು ರಕ್ಷಿಸಲು ಮೂವರು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿ ತಗುಲಿದೆ.
ಆದರೆ, ಕಾರ್‌ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.