ಬೆಂಗಳೂರಿಗೆ ಬರಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದ ಯುವಕರ ಬೈಕ್ ಅಪಘಾತವಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ .
ಕೋಲಾರ(ಮಾ.05) : ಬೆಂಗಳೂರಿಗೆ ಬರಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದ ಯುವಕರ ಬೈಕ್ ಅಪಘಾತವಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ . ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಹೊಗಳಗೆರೆ ರಸ್ತೆಯಲ್ಲಿ ಘಟನೆ ನಡೆದಿದೆ. ಶ್ರೀನಿವಾಸಪುರದ ಗಾಂಧಿನಗರ ನಿವಾಸಿಗಳಾದ ಯಶ್ವಂತ್(20), ದೊಡ್ಡ ವೆಂಕಟೇಶಪ್ಪ (50), ಯಲ್ಲಪ್ಪ (18)
ಮೃತರು.
ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಬೇಟಿ ಪರಿಶೀಲನೆ
ಶ್ರೀನಿವಾಸಪುರದಿಂದ ಬೆಂಗಳೂರಿಗೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತಕ್ಕೊಳಗಾದ ಬೈಕ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
