ಬಳ್ಳಾರಿ(ಮೇ.12): ಜಿಲ್ಲೆಯ ಜಿಂದಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಆಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ಇನ್ನೂ 4 ದಿನಗಳಲ್ಲಿ ಸಿದ್ಧವಾಗಲಿದೆ. ಹೋಂ ಐಸೋಲೇಶನ್‍ನಲ್ಲಿರುವ ಸೋಂಕಿತರನ್ನ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಿಳಿಸಿದ್ದಾರೆ. 

ಇಂದು(ಬುಧವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಹೋಂ ಐಸೋಲೇಶನ್‍ನಲ್ಲಿರುವ ಸೋಂಕಿತರು ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಜಿಲ್ಲಾಡಳಿತ ನೇಮಿಸಿದ ತಂಡಗಳು ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಮಾತ್ರ ಮನೆಯಲ್ಲಿರುತ್ತಿದ್ದಾರೆ. ನಂತರ ಹೊರಗಡೆ ಅನಗತ್ಯ ತಿರುಗಾಟ ಹಾಗೂ ಇನ್ನಿತರರಿಗೆ ಸೋಂಕು ಪಸರಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಹೋಂ ಐಸೋಲೇಶನ್‍ನಲ್ಲಿರುವ ಸೋಂಕಿತರನ್ನ ಕೋವಿಡ್ ಕೇರ್ ಸೆಂಟರ್‌ಗೆ ಶಿಫ್ಟ್‌ ಮಾಡಲಾಗುವುದು ಎಂದು ತಿಳಿಸಿದ್ದಾರೆ.

"

ವೈರಸ್‌ ರಣಕೇಕೆ: ಮದುವೆಗೆ ಕೊಟ್ಟ ಪರವಾನಗಿ ರದ್ದು

ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುವುದರ ಬದಲಿಗೆ ಹೆಚ್ಚಿನ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾಡಳಿತ ಅನೇಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡರೂ ಸಹ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona