Asianet Suvarna News Asianet Suvarna News

ಬಂಟ್ವಾಳದಲ್ಲಿ 34 ಮಂದಿಗೆ ಹೋಮ್‌ ಕ್ವಾರಂಟೈನ್‌: ನಳಿನ್‌

ಕೊರೋನಾ ಪಾಸಿಟಿವ್‌ ಪ್ರಕರಣದಲ್ಲಿ ಬಂಟ್ವಾಳದ ಮಹಿಳೆ ಮೃತಪಟ್ಟಹಿನ್ನೆಲೆಯಲ್ಲಿ ಒಟ್ಟು 34 ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

 

34 Under home quarantine in mangalore
Author
Bangalore, First Published Apr 21, 2020, 8:28 AM IST

ಬಂಟ್ವಾಳ(ಏ.21): ಕೊರೋನಾ ಪಾಸಿಟಿವ್‌ ಪ್ರಕರಣದಲ್ಲಿ ಬಂಟ್ವಾಳದ ಮಹಿಳೆ ಮೃತಪಟ್ಟಹಿನ್ನೆಲೆಯಲ್ಲಿ ಒಟ್ಟು 34 ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಬಂಟ್ವಾಳದಲ್ಲಿ ಪಾಸಿಟಿವ್‌ ಪ್ರಕರಣ ಪತ್ತೆಯಾದ ಬಳಿಕ ತುರ್ತಾಗಿ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಬಿಸಿರೋಡು ಮಿನಿವಿಧಾನ ಸೌಧದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಕೊರೋನಾ ಬಿಸಿ: ರಾಷ್ಟಟ್ರಪತಿ ಭವನದ 500 ಮಂದಿಗೆ ಕ್ವಾರಂಟೈನ್!

ಮೃತ ಮಹಿಳೆಯ ಕುಟುಂಬದ ಸದಸ್ಯರು, ಸಂಪರ್ಕದಲ್ಲಿರುವವರು ಹಾಗೂ ಸುತ್ತಮುತ್ತಲಿನ ಮನೆಯವರು ಸೇರಿದಂತೆ 28 ಜನರು ಮತ್ತು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ 6 ಮಂದಿ ಹೀಗೆ ಒಟ್ಟು 34 ಮಂದಿಯನ್ನು ಹೋಮ್‌ ಕ್ವಾರಂಟೈನ್‌ನಲ್ಲಿಡಲಾಗಿದೆ. ಘಟನೆಯ ಬಳಿಕ ಬಂಟ್ವಾಳ ದಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸೀಲ್‌ಡೌನ್‌ ಅಗಿರುವ ಬಂಟ್ವಾಳ ಪೇಟೆಯ ಜನರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಅವರಿಗೆ ದಿನಬಳಕೆಯ ವಸ್ತುಗಳನ್ನು ಶಾಸಕರ ವಾರ್‌ ರೂಂ ಹಾಗೂ ತಾಲೂಕು ಆಡಳಿತದ ಮೂಲಕ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಕೊರೋನಾ ಗೂಂಡಾಗಳಿಗೆ 2 ವರ್ಷ ಜೈಲು, ದಂಡ?: ಸುಗ್ರೀವಾಜ್ಞೆ ಜಾರಿಗೆ ನಿರ್ಧಾರ!

ಪೊಲೀಸರಿಗೆ ಹೆಚ್ಚಿನ ಪವರ್‌ ನೀಡಲಾಗಿದೆ. ಈ ಘಟನೆಯ ಬಳಿಕ ಮುಂದಿನ ಹತ್ತುದಿನಗಳ ಕಾಲ ಲಾಕ್‌ಡೌನ್‌ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಟ ಮಾಡುವವರ ಮೇಲೆ ನಿಗಾ ಇಡಿ. ಕಾನೂನು ಕ್ರಮವನ್ನು ಬಿಗಿಗೊಳಿಸಿ ಎಂದು ತಿಳಿಸಿದ್ದಾರೆ.

ಶಾಸಕ ರಾಜೇಶ್‌ ನಾಯ್ಕ್ ಉಳಿಪ್ಪಾಡಿಗುತ್ತು, ತಹಸೀಲ್ದಾರ್‌ ರಶ್ಮಿ ಎಸ್‌.ಆರ್‌. ತಾಲೂಕು ವೈದ್ಯಾಧಿಕಾರಿ ದೀಪಾ ಪ್ರಭು, ಡಿವೈಎಸ್‌ಪಿ ವೆಲಂಟೈನ್‌, ಡಿಸೋಜ, ತಾ.ಪಂ. ಇ.ಒ. ರಾಜಣ್ಣ ಮತ್ತಿತರರಿದ್ದರು.

Follow Us:
Download App:
  • android
  • ios