ತುಮಕೂರು(ಜು.24): ಐರನ್ ಕಂಟೆಂಟ್ ಮಾತ್ರೆ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಶಾಲೆಯಲ್ಲಿ ವಿತರಿಸಲಾಗಿದ್ದ ಐರನ್ ಕಂಟೆಂಟ್ ಮಾತ್ರೆ ಸೇವಿಸಿದ 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಎಸ್ ಕೊಡಿಗೆಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಶ್ರೀನಿವಾಸ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಶಾಲೆಯಲ್ಲಿ ಐರನ್ ಕಂಟೆಂಟ್ ಮಾತ್ರಗಳನ್ನ ನುಂಗಿದ್ದ ವಿದ್ಯಾರ್ಥಿಗಳಲ್ಲಿ ಒಬ್ಬೊಬ್ಬರೇ ಅಸ್ವಸ್ಥರಾಗಿದ್ದಾರೆ.

ಬಿಸಿಯೂಟ ಸೇವಿಸಿ 82 ವಿದ್ಯಾರ್ಥಿಗಳು ಅಸ್ವಸ್ಥ

ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂಜೆಕ್ಷನ್ ಪಡೆದ ಬಳಿಕ ವಿದ್ಯಾರ್ಥಿಗಳು ಶಾಲೆಗೆ‌ ವಾಪಸ್ಸಾಗಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ