ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬರೋಬ್ಬರಿ 37.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಮೂಲಕ ಸತತ ಒಂದು ವಾರ ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು (ಏ.27): ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬರೋಬ್ಬರಿ 37.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಮೂಲಕ ಸತತ ಒಂದು ವಾರ ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮಾರ್ಚ್‌ ಕೊನೆಯ ವಾರದಿಂದ ನಗರದ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಏಪ್ರಿಲ್‌ ಮೊದಲ ವಾರದಲ್ಲಿ ಮೊದಲ ಬಾರಿಗೆ 37 ಡಿಗ್ರಿ ಸೆಲ್ಸಿಯಸ್‌ನ ಗಡಿ ದಾಟಿತ್ತು. 

ಏ.6ರಂದು 37.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಮೂಲಕ ನಗರದಲ್ಲಿ ಎಂಟು ವರ್ಷದ ಏಪ್ರಿಲ್‌ನಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶವಾಗಿತ್ತು. ಬಳಿಕ ಅದೇ ಆಸು ಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿತ್ತು. ಏ.19ರಂದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಆ ಬಳಿಕ ನಗರದಲ್ಲಿ ಸತತವಾಗಿ ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ಬಿಸಿಲು ವರದಿಯಾಗುತ್ತಿದೆ.

ಬಿಜೆಪಿಯಲ್ಲಿ ಎಲ್ಲರಿಗೂ ಒಂದೇ ನ್ಯಾಯ: ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಮತದಾನ ನಡೆದ ಶುಕ್ರವಾರ ಹಾಗೂ ಮತದಾನ ಪೂರ್ವ ದಿನ ಗುರುವಾರವೂ 37.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಶುಕ್ರವಾರ ನಗರದಲ್ಲಿ ಬಿಸಿ ಗಾಳಿ ಬೀಸಿದ ಅನುಭವ ಉಂಟಾಗಿದೆ. ಸೆಕೆಯ ಹೆಚ್ಚಾದಂತೆ ಬಾಸವಾಗುತ್ತಿತ್ತು. ಇನ್ನು ಶುಕ್ರವಾರ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ 37.7 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ, ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 36.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಕಳೆದ ಆರು ದಿನಗಳ ನಗರದ ಗರಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌).

ಬಿಸಿಲಿಗೆ ಬೆಂಗಳೂರು ಧಗಧಗ: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಇದು ಪ್ರಸಕ್ತ ಏಪ್ರಿಲ್‌ ತಿಂಗಳಿನಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ. ಮಾರ್ಚ್‌ ಕೊನೆಯ ವಾರದಿಂದ ನಗರದ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಏಪ್ರಿಲ್‌ ಮೊದಲ ವಾರದಲ್ಲಿ ಮೊದಲ ಬಾರಿಗೆ 37 ಡಿಗ್ರಿ ಸೆಲ್ಸಿಯಸ್‌ನ ಗಡಿ ದಾಟಿತ್ತು. ಏ.6ರಂದು 37.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಮೂಲಕ ನಗರದಲ್ಲಿ ಎಂಟು ವರ್ಷದ ಏಪ್ರಿಲ್‌ನಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶವಾಗಿತ್ತು. ಬಳಿಕ ಅದೇ ಆಸು ಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿತ್ತು. 

ರಣಹೇಡಿಯ ರೀತಿ ಮಂಡ್ಯ ಕ್ಷೇತ್ರಕ್ಕೆ ಓಡಿದ ಕುಮಾರಸ್ವಾಮಿ: ಡಿ.ಕೆ.ಶಿವಕುಮಾರ್ ವಂಗ್ಯ

ದಿನ ಗರಿಷ್ಠ ಉಷ್ಣಾಂಶ
ಏ.26 37.4
ಏ.25 37.4
ಏ.24 37.0
ಏ.23 37.6
ಏ.22 37.2
ಏ.21 37.4