ಬೆಂಗಳೂರು (ನ.23):  ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ. 25ರಿಂದ ಸುಮಾರು ನಾಲ್ಕು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಕೋಲಾರ, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯಲಿದ್ದು, ಈ ಜಿಲ್ಲೆಗಳಿಗೆ ನ.25ಕ್ಕೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಸದ್ಯ ತಮಿಳುನಾಡು ಕರಾವಳಿ ಭಾಗಕ್ಕೆ ಹತ್ತಿರವಿರುವ ಸಮುದ್ರಮಟ್ಟದ ಮೇಲ್ಮೈ ಸುಳಿಗಾಳಿ ನ.25ರ ಹೊತ್ತಿಗೆ ಮತ್ತಷ್ಟುತೀವ್ರಗೊಂಡು ಅಲ್ಲಿಂದ ರಾಜ್ಯದ ದಕ್ಷಿಣ ಒಳನಾಡು ಪ್ರವೇಶ ಮಾಡಲಿದೆ. ಈ ವೇಳೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣದ ಲಕ್ಷಣ ಇರಲಿದೆ. ಜೊತೆಗೆ ಆಗಾಗ ಬಿಸಿಲು ಸಹಿತ ಮಳೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಉತ್ತರ ಒಳನಾಡು ಸೇರಿದಂತೆ ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕರ್ನಾಟಕದಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ ...

ನ.22ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಎಲ್ಲಿಯೂ ಮಳೆ ಸುರಿದಿಲ್ಲ. ದಾವಣಗೆರೆಯಲ್ಲಿ ಕನಿಷ್ಠ 11.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.