ಬೆಂಗಳೂರು: ಬನಶಂಕರಿ- ನೈಸ್ ರಸ್ತೆ ಮಧ್ಯೆ 4 ಪಥದ ಫ್ಲೈಓವರ್?
ಇತ್ತೀಚಿನ ದಿನಗಳಲ್ಲಿ ಕನಕಪುರ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಈಗಾಗಲೇ ಕನಕಪುರ ರಸ್ತೆಯಲ್ಲಿ ಮೆಟ್ರೋ ಮಾರ್ಗ ನಿರ್ಮಾಣ ಮಾಡಲಾಗಿದೆ. ಇದರಿಂದ ಗ್ರೇಡ್ ಸಪರೇಟ್ ನಿರ್ಮಾಣ ಮಾಡುವುದಕ್ಕೆ ಸಾಧ್ಯವಿಲ್ಲ. ಹಾಗಾಗಿ, ಕನಕಪುರ ರಸ್ತೆಗೆ ಸಮನಾಂತರವಾಗಿ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ವಿಶ್ವನಾಥ ಮಲೇಬೆನ್ನೂರು
ಬೆಂಗಳೂರು(ಡಿ.07): ಕನಕಪುರ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಬಿಬಿಎಂಪಿಯು ಬನಶಂಕರಿಯಿಂದ ನೈಸ್ ರಸ್ತೆ ವರೆಗೆ ಸುಮಾರು 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಕನಕಪುರ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಈಗಾಗಲೇ ಕನಕಪುರ ರಸ್ತೆಯಲ್ಲಿ ಮೆಟ್ರೋ ಮಾರ್ಗ ನಿರ್ಮಾಣ ಮಾಡಲಾಗಿದೆ. ಇದರಿಂದ ಗ್ರೇಡ್ ಸಪರೇಟ್ ನಿರ್ಮಾಣ ಮಾಡುವುದಕ್ಕೆ ಸಾಧ್ಯವಿಲ್ಲ. ಹಾಗಾಗಿ, ಕನಕಪುರ ರಸ್ತೆಗೆ ಸಮನಾಂತರವಾಗಿ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಈ ಕುರಿತು ಈಗಾಗಲೇ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಬಿಎಂಪಿ ಮುಖ್ಯಆಯುಕ್ತರಿಗೆ ಸಂಭಾವನೀಯ ವರದಿ ಹಾಗೂ ವಿಸ್ತ್ರತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಬಿಬಿಎಂಪಿಯ ಯೋಜನಾ ವಿಭಾಗದ ಅಧಿಕಾರಿಗಳು ಈಗಾಗಲೇ ಕಾರ್ಯೋನ್ನುಖರಾಗಿದ್ದಾರೆ.
ಬೆಂಗಳೂರು: ಬೈಯಪ್ಪನಹಳ್ಳಿ ಫ್ಲೈಓವರ್ ವೆಚ್ಚ ಭಾರಿ ಹೆಚ್ಚಳ!
ಕಾವೇರಿ ಪೈಪ್‌ಲೈನ್ ರಸ್ತೆ ಗುರುತು:
ಕನಕಪುರ ರಸ್ತೆಯಲ್ಲಿ ಈಗಾಗಲೇ ನಮ್ಮ ಮೆಟ್ರೋ ಮಾರ್ಗ ಇರು ವುದರಿಂದ ಆ ರಸ್ತೆಯಲ್ಲಿ ಎಲಿವೇಟೆಡ್ ಫ್ಲೈಓವರ್ ನಿರ್ಮಾಣ ಮಾಡುವುದಕ್ಕೆ ಸಾಧ್ಯವಿಲ್ಲ. ಅಕ್ಕ-ಪಕ್ಕದಲ್ಲಿ ರುವ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ನಿರ್ಮಾಣ ಮಾಡುವುದಕ್ಕೆ ಭೂಸ್ವಾಧೀನ ವೆಚ್ಚವು ದುಬಾರಿ ಆಗಲಿದೆ. ಈ ಕಾರಣಕ್ಕೆ ತೊರೆಕಾಡನಹಳ್ಳಿಯಿಂದ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಗೆ ಅಳವಡಿಕೆ ಮಾಡಿರುವ ಪೈಪ್ ಲೈನ್ ರಸ್ತೆಯಲ್ಲಿ ಎಲಿವೇಟೆಡ್ ಫ್ಲೈಓವರ್ ನಿರ್ಮಾಣ ಉತ್ತಮವಾಗಿದೆ. ಈ ಮಾರ್ಗದಲ್ಲಿ ಬಹುತೇಕ ಸರ್ಕಾರಿ ಜಾಗ. ಅಪ್ ಕ್ಯಾಂಪ್ ಮತ್ತು ಡೌನ್ ಕ್ಯಾಂಪ್‌ನಲ್ಲಿ ಸ್ವಲ್ಪ ಖಾಸಗಿ ಭೂ ಸ್ವಾಧೀನ ಮಾಡುವ ಅಗತ್ಯ ಉಂಟಾಗಬಹುದಾಗಿದೆ ಎನ್ನುವ ಕಾರಣಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.
10 ಕಿ.ಮೀ ನಾಲ್ಕು ಪಥ
ಎಲಿವೇಟೆಡ್ ಫ್ಲೈಓವರ್ ಬನಶಂಕರಿಯ ಬೆಂಗಳೂರು ಜಲಮಂಡಳಿಯ ಜಲಾಗಾರದಿಂದ ಆರಂಭಗೊಂಡು ನೈಸ್ ರಸ್ತೆಯಿಂದ ಮುಂದೆ ಹೋಗಿ ಕನಕಪುರ ರಸ್ತೆಯಲ್ಲಿ ಅಂತ್ಯಗೊಳ್ಳಲಿದೆ. ಒಟ್ಟು ನಾಲ್ಕು ಪಥದ ಎಲಿವೇಟೆಡ್ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತದೆ. 10 ಕಿ.ಮೀ ಉದ್ದದಲ್ಲಿ 4 ರಿಂದ 5 ಅಪ್ ಕ್ಯಾಂಪ್ ಹಾಗೂ ಡೌನ್ ಕ್ಯಾಂಪ್ ನಿರ್ಮಾಣ ಮಾಡಲಾಗುತ್ತದೆ.
ಎಲಿವೇಟೆಡ್ ಫ್ಲೈಓವರ್ ನಿರ್ಮಾಣಕ್ಕೆ ಸುಮಾರು 1 ಸಾವಿರದಿಂದ ₹1,200 ಕೋಟಿವರೆಗೆ ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯ ಸರ್ಕಾರ ವಿಶೇಷ ಅನುದಾನದಲ್ಲಿ ನಿರ್ಮಾಣಕ್ಕೆ ಬಿಬಿಎಂಪಿ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಬೆಂಗ್ಳೂರಿನ ಈ ಮೂರು ಫ್ಲೈಓವರ್‌ಗಳು ಭಾರೀ ಡೇಂಜರಸ್..!
ದಕ್ಷಿಣ ಭಾರತದ ಪ್ರಥಮ ಡಬಲ್ ಡೆಕ್ಕರ್ ಫ್ಲೈಓವರ್ ಸೇವೆಗೆ: ಯಾರಿಗೆ ಹೆಚ್ಚು ಅನುಕೂಲ?
ಬೆಂಗಳೂರು: ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ (3.36 ಕಿ.ಮೀ.) ನಿರ್ಮಾಣ ಆಗಿರುವ ದಕ್ಷಿಣ ಭಾರತದ ಪ್ರಥಮ ಡಬಲ್ ಡೆಕ್ಕರ್ (ಎಲಿವೆಟೆಡ್ ರೋಡ್ ಕಂ ಮೆಟ್ರೋ ಫ್ಲೈಓವರ್) ಉದ್ಘಾಟನೆಯಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಡಬಲ್ ಡೆಕ್ಕರ್ ಉದ್ಘಾಟಿಸಿದ್ದರು. ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಮೆಟ್ರೋ ಹಳದಿ (ಆರ್.ವಿ.ರಸ್ತೆ - ಬೊಮ್ಮಸಂದ್ರ) ಮಾರ್ಗದಲ್ಲಿ ಈ ಡಬಲ್ ಡೆಕ್ಕರ್ ನಿರ್ಮಾಣವಾಗಿದೆ.
ನಗರದಲ್ಲಿ ವಿಪರೀತ ಸಂಚಾರ ದಟ್ಟಣೆಯ ರಸ್ತೆಗಳಲ್ಲಿ ಒಂದಾಗಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಮಾರ್ಗದಲ್ಲಿ ಡಬಲ್ ಡೆಕ್ಕರ್‌ನಿಂದ ಟ್ರಾಫಿಕ್ ಸಮಸ್ಯೆಗೆ ಹೆಚ್ಚಿನ ಪರಿಹಾರ ಸಿಗುವ ನಿರೀಕ್ಷೆಯಿದೆ. ಆದರೆ, ಬೆಂಗಳೂರು ಮೆಟ್ರೋ ರೈಲು ನಿಗಮವು ರೂಪಿಸಿದ ಈ ಡಬಲ್ ಡೆಕ್ಕರ್ ಸಂಪೂರ್ಣ ಪ್ರಯೋಜನವನ್ನು ಮುಂದಿನ ವರ್ಷದಿಂದಲೇ ನಿರೀಕ್ಷಿಸಬಹುದಾಗಿದೆ. ನೆಲಮಟ್ಟದಿಂದ 8 ಮೀಟರ್ ಎತ್ತರದಲ್ಲಿ ವಾಹನ ಓಡಾಟಕ್ಕಾಗಿ ಮೇಲ್ಸೇತುವೆ ನಿರ್ಮಾಣವಾಗಿದ್ದು, 16 ಮೀಟರ್ ಎತ್ತರದಲ್ಲಿ ಮೆಟ್ರೋ ಹಳದಿ ಮಾರ್ಗವಿದೆ. ಇಲ್ಲಿ ವರ್ಷಾಂತ್ಯಕ್ಕೆ ಚಾಲಕರಹಿತ ರೈಲಿನ ಸಂಚಾರ ಶುರುವಾಗುವ ಸಾಧ್ಯತೆಯಿದೆ.