ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು ಚಾಮರಾಜನಗರದ ಮೂಕನಹಳ್ಳಿಯಲ್ಲಿ ಘಟನೆ ಕುಟುಂಬದಲ್ಲೋರ್ವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು
ಚಾಮರಾಜನಗರ (ಜೂ.02): ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಾಮರಾಜನಗರ ಜಿಲ್ಲೆ ಎಚ್. ಮೂಕನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹದೇವಪ್ಪ(46), ಇವರ ಪತ್ನಿ, 10 ವರ್ಷದ ಪುತ್ರಿ ಹಾಗೂ 12 ವರ್ಷ ಮತ್ತೊಬ್ಬ ಪುತ್ರಿ ನೇಣಿಗೆ ಶರಣಾಗಿದ್ದಾರೆ. ಕೆಲ ದಿನಗಳಿಂದ ಮಹಾದೇವಪ್ಪ ಅವರಿಗೆ ಕೊರೋನಾ ಪಾಸಿಟಿವ್ ಆಗಿ ಹೋಂ ಐಸೊಲೇಷನ್ ನಲ್ಲಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಕೊರೋನಾ 3ನೇ ಅಲೆ ಎದುರಿಸಲು ರಾಜ್ಯಾದ್ಯಂತ ತಯಾರಿ ಆರಂಭ ...
ಇದೀಗ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದು, ಕೊರೋನಾ ಆತಂಕದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೇ ಕೋವಿಡ್ ಅನೇಕ ಜೀವಗಳನ್ನು ಬಲಿ ಪಡೆದಿದ್ದು, ಆತಂಕದಿಂದಲೂ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
