ಹಾಸನ (ಡಿ.24) : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್ ಉರುಳಿ ಬಿದ್ದ ಘಟನೆ ಹಾಸನದಲ್ಲಿ ನಡೆದಿದೆ. 

ಹಾಸನ ಹೊರಬಲಯದ ಸಂಕೇನಹಳ್ಳಿ ಬಳಿ ಘಟನೆ ನಡೆದಿದ್ದು, ಈ ವೇಳೆ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. 

ಬಸ್ಸಿನಲ್ಲಿ 30ಕ್ಕೂ ಹೆಚ್ಚು ಮಕ್ಕಳಿದ್ದು,  ಮುಂಜಾನೆ ಶಾಲೆಗೆ ಮಕ್ಕಳನ್ನು ಕರೆದೊಯ್ಯುವಾಗ ಈ ದುರ್ಘಟನೆ ನಡೆದಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ಚಿರಂತನ ಶಾಲೆಗೆ ಸೇರಿದ ಬಸ್ ಇದಾಗಿದ್ದು ರಸ್ತೆಯಿಂದ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಇನ್ನು ಗಾಯಾಳು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ಥಳಕ್ಕೆ ಹಾಸನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.