ಮಂಗಳೂರಲ್ಲಿ ಬುರ್ಖಾ ಧರಿಸಿ ಅಸಭ್ಯ ನೃತ್ಯ: 4 ವಿದ್ಯಾರ್ಥಿಗಳ ಸಸ್ಪೆಂಡ್‌

ವಾಮಂಜೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬುಧವಾರ ಅಧಿಕೃತ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳು ಅಸಭ್ಯವಾಗಿ ನೃತ್ಯ ಮಾಡಿದ್ದಾರೆ. ವಿದ್ಯಾರ್ಥಿಗಳು ಅದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 

4 Students Suspended For Indecent Dance Wearing Burqa in Mangaluru grg

ಮಂಗಳೂರು(ಡಿ.09): ನಗರದ ಖಾಸಗಿ ಕಾಲೇಜೊಂದರ ವೇದಿಕೆ ಮೇಲೆ ನಾಲ್ವರು ವಿದ್ಯಾರ್ಥಿಗಳು ಬುರ್ಖಾ, ಹಿಜಾಬ್‌ ಧರಿಸಿ ಅಸಭ್ಯವಾಗಿ ನರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಾಲೇಜು ಆಡಳಿತ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ವಾಮಂಜೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬುಧವಾರ ಅಧಿಕೃತ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳು ಅಸಭ್ಯವಾಗಿ ನೃತ್ಯ ಮಾಡಿದ್ದಾರೆ. ವಿದ್ಯಾರ್ಥಿಗಳು ಅದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಆಂತರಿಕ ವಿಚಾರಣೆ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ.

MANGALURU MORAL POLICING: ಕಾಂತಾರ ಸಿನಿಮಾ ನೋಡಲು ಬಂದಿದ್ದ ಮುಸ್ಲಿಂ ಜೋಡಿ ಮೇಲೆ ನೈತಿಕ ಪೊಲೀಸ್ ಗಿರಿ!

ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ವೇದಿಕೆಯಲ್ಲಿ ಈ ನೃತ್ಯ ಮಾಡಿದ್ದು, ವಿದ್ಯಾರ್ಥಿಗಳು ಅದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ. ಕಾಲೇಜು ತನ್ನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಇಂಥಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಸುಧೀರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 


ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಕಾಲೇಜು, ಈ ಡ್ಯಾನ್ಸನ್ನು ಮುಸ್ಲಿಮ್ ವಿದ್ಯಾರ್ಥಿಗಳೇ ಪ್ರದರ್ಶಿಸಿದ್ದು, ಕಾಲೇಜಿನ ಯೋಜಿತ ಕಾರ್ಯಕ್ರಮದಡಿಯಲ್ಲಿ ಇರಲಿಲ್ಲ. ಆದ್ದರಿಂದ ಈ ಘಟನೆಗ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಯುತ್ತಿದ್ದು, ವಿದ್ಯಾರ್ಥಿ ಸಂಘದ ಉದ್ಘಾಟನೆ ವೇಲೆ ಅಸಭ್ಯ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಲನ್ನು ಅಮಾನತ್ತುಗೊಳಿಸಲಾಗಿದೆ, ಎಂದು ಸ್ಪಷ್ಟಪಡಿಸಿದೆ. 

ಉಡುಪಿಯಲ್ಲಿ ಐವರು ವಿದ್ಯಾರ್ಥಿಗಳು ಕಾಲೇಜಿಗೆ ಹಿಜಾಬು ಧರಿಸಿ ಹೋದಾಗ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಘಟನೆ ದೇಶಾದ್ಯಂತ ಚರ್ಚೆಯಾಗಿತ್ತು. ಶೈಕ್ಷಣಿಕ ಸಂಸ್ಥೆಗಳಲ್ಲಿ ಧರ್ಮವನ್ನು ಬಿಂಬಿಸುವ ಯಾವುದೇ ವಸ್ತ್ರ ಧರಿಸಬಾರದು ಎಂದು ಕೋರ್ಟ್ ಅದೇಶಿಸಿದೆ. ಇದಾದ ನಂತರ ಹಿಜಾಬು ಹಾಗೂ ಬುರ್ಖಾ ಸಂಬಂಧಿ ವಿಷಯಗಳನ್ನು ಎಲ್ಲೆಡೆ ಸೂಕ್ಷ್ಮವಾಗಿಯೇ ಪರಿಗಣಿಸಲಾಗುತ್ತಿದೆ. 

Latest Videos
Follow Us:
Download App:
  • android
  • ios