ವಿಜಯಪುರ: ಚಲಿಸುತ್ತಿದ್ದ ಬಸ್‌ಗೆ ಡಿಕ್ಕಿ, 40 ಪ್ರಯಾಣಿಕರಿಗೆ ಗಾಯ, ತಪ್ಪದ ಭಾರೀ ದುರಂತ

ಬಸ್ ಗಳಲ್ಲಿ ಚಡಚಣ ಪಟ್ಟಣಕ್ಕೆ ಪರೀಕ್ಷೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಎಂಟರಿಂದ ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಇವರನ್ನ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

40 Passengers Injured Due to Two KSRTC Buses Accident in Vijayapura grg

ಚಡಚಣ(ಫೆ.20):  ಪಟ್ಟಣದ ಹೊರವಲಯದಲ್ಲಿ ಕೆಎಸ್ ಆರ್ ಟಿಸಿ ಬಸ್‌ಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಗಿನ ಜಾವ ಸಂಭವಿಸಿದೆ. 

ಇಂಡಿಯಿಂದ ಹಲಸಂಗಿ ಬತಗುಣಕಿ ಮಾರ್ಗವಾಗಿ ಚಡಚಣಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಗಳು ಎದುರಿನಿಂದ ಬಂದ ಶಾಲಾ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಈ ವೇಳೆ ಮುಂದೆ ತೆರಳುತ್ತಿದ್ದ ಬಸ್‌ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದ್ದಾನೆ. ಬಳಿಕ ಹಿಂಬದಿಯಲ್ಲಿ ಇದೇ ರಸ್ತೆಯಲ್ಲಿ ಬರುತ್ತಿದ್ದ ಇನ್ನೊಂದು ಬಸ್‌ ಚಾಲಕ ಸಹ ಬ್ರೇಕ್‌ ಹಾಕಲು ಯತ್ನಿಸಿದ್ದು, ಬಸ್ ನಿಯಂತ್ರಣಕ್ಕೆ ಸಿಗದೆ ಮುಂದಿನ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ಗೆ ಹಿಂಬದಿಯಿಂದ ಮತ್ತೊಂದು ಬಸ್‌ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಕೆಎ28 ಎಫ್1727 ಮತ್ತು ಕೆಎ 28 ಎಫ್1766 ನಂಬರಿನ ಕೆಎಸ್ ಆರ್ ಟಿಸಿ ಬಸ್‌ ಗಳ ಮಧ್ಯೆ ಡಿಕ್ಕಿ ಸಂಭವಿಸಿದೆ. 

ವಿಜಯಪುರ: ಪತ್ನಿಯ ಶೀಲ ಶಂಕಿಸಿ ಸನಿಕೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪತಿ!

ಪರಿಣಾಮ ಬಸ್ ಗಳ ಮುಂಭಾಗ ಮತ್ತು ಹಿಂದಭಾಗ ಜಖಂಗೊಂಡಿವೆ. ಬಸ್ ಗಳಲ್ಲಿ ಚಡಚಣ ಪಟ್ಟಣಕ್ಕೆ ಪರೀಕ್ಷೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಎಂಟರಿಂದ ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಇವರನ್ನ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಚಡಚಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Videos
Follow Us:
Download App:
  • android
  • ios