ಅಥಣಿ(ಏ.30): ಕಳೆದ ವರ್ಷದ ಲಾಕ್‌ಡೌನ್‌ ಮತ್ತು ಇತ್ತೀಚೆಗೆ ಸಾರಿಗೆ ನೌಕರರ ಮುಷ್ಕರದಿಂದಾಗಿ ಇಲಾಖೆಗೆ ಸುಮಾರು 4000 ಕೋಟಿ ನಷ್ಟವಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. 

ಗುರುವಾರ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಜೂನ್‌ವರೆಗೆ ಸರ್ಕಾರದ ಆರ್ಥಿಕ ಸಹಾಯ ಪಡೆದು ಸಾರಿಗೆ ನೌಕರರಿಗೆ ಸಂಬಳ ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಮುಷ್ಕರ: ನೌಕರರಿಗೆ ಲಾಭಕ್ಕಿಂತ ಹಾನಿಯೇ ಜಾಸ್ತಿ..! 

ಉಪಚುನಾವಣೆಯ ಫಲಿತಾಂಶ ಕುರಿತು ಹೇಳಿದ ಅವರು, ಮೂರು ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವುದು ಖಚಿತ. ಆದರೆ ಎಷ್ಟುಅಂತರದಲ್ಲಿ ಗೆಲವು ಸಾಧಿಸುತ್ತಾರೆ ಎಂದು ನೋಡಬೇಕು ಎಂದು ತಿಳಿಸಿದ್ದಾರೆ.