ಬೆಂಗಳೂರು(ಜು.24): ಮುಂದಿನ ಐದು ವರ್ಷದಲ್ಲಿ ರಾಜ್ಯದಲ್ಲಿ ಐದು ಕೋಟಿ ಲಕ್ಷ ಕೋಟಿ ರು. ಬಂಡವಾಳ ಆಕರ್ಷಿಸುವುದು, 20 ಲಕ್ಷ ಮಂದಿಗೆ ಉದ್ಯೋಗಾವಕಾಶ ನೀಡಿಕೆ, ಎರಡು ಮತ್ತು ಮೂರನೇ ಹಂತದ ನಗರದಲ್ಲಿ ಕೈಗಾರಿಕೆಗಳಿಗೆ ಒತ್ತು ನೀಡುವುದು ಸೇರಿದಂತೆ ಸಣ್ಣ ಕೈಗಾರಿಕೆಗಳಿಗೆ ಸುಂಕ, ತೆರಿಗೆ ರಿಯಾಯಿತಿ, ವಿನಾಯತಿ ನೀಡುವ ‘ನೂತನ ಕೈಗಾರಿಕಾ ನೀತಿ 2020-25’ಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ರಾಜ್ಯವು ಸುಧಾರಿತ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಜಾಗತಿಕ ನಾಯಕನಾಗಲು ಮತ್ತು ನಾವೀನ್ಯತೆ, ಸಮತೋಲಿತ ಹಾಗೂ ಸುಸ್ಥಿರ ಅಭಿವೃದ್ಧಿಗೊಳಿಸುವುದು ಪ್ರಮುಖ ಗುರಿಯನ್ನು ಹೊಂದಲಾಗಿದೆ.

ಶೇ.30 ಪಠ್ಯ ಕಡಿತದ ಬಗ್ಗೆ ವಾರದಲ್ಲಿ ಆದೇಶ..!

ಪ್ರಸ್ತುತ ಸರಕುಗಳ ರಫ್ತಿನಲ್ಲಿ ರಾಜ್ಯವು ನಾಲ್ಕನೇ ಸ್ಥಾನದಲ್ಲಿದ್ದು, ಮುಂದಿನ ಐದು ವರ್ಷಗಳಲ್ಲಿ ಅದನ್ನು ಮೂರನೇ ಸ್ಥಾನಕ್ಕೆ ಕೊಂಡೊಯ್ಯುವುದು, ಕೈಗಾರಿಕಾ ಅಭಿವೃದ್ಧಿ ವಾರ್ಷಿಕ ಶೇ.10ರಷ್ಟುಇರುವಂತೆ ನೋಡಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ ಎಂದರು.

ಬೆಂಗಳೂರಿನಿಂದ ಹೊರಗಡೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶದಿಂದ ಎರಡು ಮತ್ತು ಮೂರನೇ ಹಂತದ ನಗರಗಳಿಗೆ ವಿಸ್ತರಣೆ ಮಾಡುವ ಧ್ಯೇಯವನ್ನು ಹೊಂದಲಾಗಿದೆ. ಕೈಗಾರಿಕೆ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಉತ್ತೇಜಿಸಲಾಗುವುದು.ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿಗಾಗಿ ಮೂರು ವಲಯಗಳಾಗಿ ವಿಂಗಡಿಸಲಾಗಿದ್ದು, ಮುಖ್ಯಮಂತ್ರಿಗಳ ನೇತೃತ್ವದ ಉನ್ನತ ಮಟ್ಟದ ಸಮಿತಿಯು ವಿಂಗಡಣೆಯನ್ನು ಮಾಡಲಿದೆ. ವಲಯ 1 ಮತ್ತು 2ರಲ್ಲಿ ಹಿಂದುಳಿದ ಜಿಲ್ಲೆ, ತಾಲ್ಲೂಕುಗಳು ಬರಲಿದ್ದು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ವಲಯ 3 ರಲ್ಲಿ ಸೇರಿಸಲಾಗಿದೆ. ಅಲ್ಲದೇ, ಬೀದರ್‌- ಮೈಸೂರು ಕೈಗಾರಿಕಾ ಕಾರಿಡಾರ್‌ನಲ್ಲಿ ರೈಲ್ವೆ ಸಂಪರ್ಕ ಕಲ್ಪಿಸುವ ಕುರಿತು ನೀತಿಯಲ್ಲಿ ಸೇರಿಸಲಾಗುವುದು ಎಂದು ವಿವರಿಸಿದರು.

ತನ್ನನ್ನು ಕೊಲ್ಲಲು ಯತ್ನಿಸಿದ ತಂದೆಯನ್ನೇ ಕೊಂದ 15 ವರ್ಷದ ಬಾಲಕಿ..!

ಎಂಎಸ್‌ಎಂಇ ಗಳಿಗೆ ಶ್ರೇಷ್ಠತಾ ಕೇಂದ್ರ, ಕಚ್ಚಾ ವಸ್ತು ಪೂರೈಕೆದಾರರು, ಮಾರುಕಟ್ಟೆಪ್ರವೇಶಾವಕಾಶ ಮತ್ತು ಪ್ರಮಾಣೀಕರಣಕ್ಕಾಗಿ ಆನ್‌ಲೈನ್‌ ತಂತ್ರಜ್ಞಾನ ವೇದಿಕೆಯನ್ನು ವಿನ್ಯಾಸಗೊಳಿಸುವುದು ಹಾಗೂ ಸಾಲದ ಬಳಕೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕೆಐಎಡಿಬಿಯು ತನ್ನ ಕೈಗಾರಿಕಾ ಪ್ರದೇಶದಲ್ಲಿ ಎಂಎಸ್‌ಎಂಇ ಗಳಿಗಾಗಿ ಕನಿಷ್ಠ ಶೇ.30ರಷ್ಟುಹಂಚಿಕೆಯ ಜಮೀನನ್ನು ಮೀಸಲಿಡಲಾಗುವುದು. ಕೌಶಲ್ಯಾಭಿವೃದ್ಧಿ ಮತ್ತು ಉದ್ದಿಮೆದಾರರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸುವುದು, ಎಂಎಸ್‌ಎಂಇ ಉತ್ಪಾದನಾ ಶ್ರೇಷ್ಠತಾ ಪ್ರಶಸ್ತಿ ನೀಡುವುದು ಹೊಸ ನೀತಿಯಲ್ಲಿದೆ ಎಂದು ಹೇಳಿದರು.

ವಿಶೇಷ ಹೂಡಿಕೆ ಪ್ರದೇಶ ಕಾಯ್ದೆ ಪ್ರಸ್ತಾಪ

100ಕ್ಕಿಂತಲೂ ಹೆಚ್ಚು ಚದರ ಕಿಲೋಮೀಟರ್‌ ವಿಸ್ತೀರ್ಣವನ್ನು ಹೊಂದಿರುವ ವಿಶೇಷ ಹೂಡಿಕೆ ಪ್ರದೇಶವನ್ನು (ಎಸ್‌ಐಆರ್‌) ಸ್ಥಾಪಿಸಲು, ಅಭಿವೃದ್ಧಿ ಪಡಿಸಲು ಮತ್ತು ನಿರ್ವಹಿಸಲು ರಾಜ್ಯದಲ್ಲಿ ವಿಶೇಷ ಹೂಡಿಕೆ ಪ್ರದೇಶ ಕಾಯ್ದೆ ಜಾರಿಗೆ ತರಲು ಪ್ರಸ್ತಾಪಿಸಲಾಗಿದೆ. ಈ ಪ್ರದೇಶವನ್ನು ಕೈಗಾರಿಕಾ ಟೌನ್‌ಶಿಪ್‌ ಎಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ವಿಕಾಸ್‌ ದುಬೆ ಎನ್ಕೌಂಟರ್‌ ನಂತರ ಬದಲಾದ ಉ.ಪ್ರ ರಾಜಕೀಯ; ಬ್ರಾಹ್ಮಣರ ಓಲೈಕೆಯಲ್ಲಿ ಪ್ರಿಯಾಂಕ ಗಾಂಧಿ

ಧಾರವಾಡ, ಗದಗ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಯನ್ನೊಳಗೊಂಡ ಧಾರವಾಡ ವಿಶೇಷ ಹೂಡಿಕೆ ಪ್ರದೇಶವನ್ನು ಸ್ಥಾಪಿಸಲಾಗುವುದು. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನೊಳಗೊಂಡ ಶಿವಮೊಗ್ಗ ವಿಶೇಷ ಹೂಡಿಕೆ ಪ್ರದೇಶ ಸ್ಥಾಪನೆ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನೊಳಗೊಂಡ ಕಲಬುರಗಿ ವಿಶೇಷ ಹೂಡಿಕೆ ಪ್ರದೇಶ ಸ್ಥಾಪನೆಗೆ ಮಾಡಲಾಗುವುದು. ಶಾಸನಬದ್ಧವಾಗಿ ಕಾರ್ಯಗಳನ್ನು ನಿರ್ವಹಿಸಲು ಕರ್ನಾಟಕ ರಾಜ್ಯ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಹೇಳಿದರು.

ನೂತನ ಕೈಗಾರಿಕಾ ನೀತಿಯಲ್ಲಿನ ಇತರೆ ಅಂಶಗಳು

- ಶೇ.100ರಷ್ಟುಗ್ರೂಪ್‌ ಡಿ ಕಾರ್ಮಿಕರಿಗೆ ಉದ್ಯೋಗ, ಶೇ.70ರಷ್ಟುಕನ್ನಡಿಗರಿಗೆ ಒಟ್ಟಾರೆ ಆಧಾರದ ಮೇಲೆ ಉದ್ಯೋಗ ಒದಗಿಸುವುದು

- ವಾರ್ಷಿಕ ವಹಿವಾಟಿನ ಮೇಲೆ ಪ್ರೋತ್ಸಾಹ ನೀಡಿಕೆ

- ಎಂಎಸ್‌ಎಂಇಗೆ ಮುದ್ರಾಂಕ ಶುಲ್ಕ ವಿನಾಯಿತಿ ಮತ್ತು ನೋಂದಣಿ ಶುಲ್ಕದಲ್ಲಿ ರಿಯಾಯಿತಿ

- ಭೂ ಪರಿವರ್ತನಾ ಶುಲ್ಕ ಮರುಪಾವತಿ

- ಎಂಎಸ್‌ಎಂಇಗೆ ವಿದ್ಯುತ್‌ ತೆರಿಗೆ ವಿನಾಯಿತಿ

- ತಾಲೂಕಿನಲ್ಲಿ 100 ಕೋಟಿ ರು.ಗಿಂತ ಹೆಚ್ಚಿನ ಬಂಡವಾಳ ಹೂಡಿದರೆ ಸಹಾಯಧನ

- ಖಾಸಗಿ ಕೈಗಾರಿಕಾ ಪಾರ್ಕ್ಗಳನ್ನು ಅಭಿವೃದ್ಧಿಪಡಿಸಲು ರಿಯಾಯಿತಿ ಮತ್ತು ಪ್ರೋತ್ಸಾಹ

- ರಫ್ತು ಆಧಾರಿತ ಘಟಕಗಳಿಗೆ ಉತ್ತೇಜನ

ಆದ್ಯತಾ ಕ್ಷೇತ್ರಗಳು

ಆಟೋಮೊಬೈಲ್ಸ್‌ ಮತ್ತು ಮೆಷಿನ್‌ ಟೂಲ್ಸ್‌, ಫಾರ್ಮಾಸ್ಯೂಟಿಕಲ್‌ ಮತ್ತು ಮೆಡಿಕಲ್‌ ಡಿವೈಸಸ್‌, ಎಂಜಿನಿಯರಿಂಗ್‌ ಮತ್ತು ಮೆಷಿನ್‌ ಟೂಲ್ಸ್‌, ಜ್ಞಾನಾಧಾರಿತ ಕೈಗಾರಿಕೆ, ಇಂಡಸ್ಟ್ರೀಸ್‌, ಲಾಜಿಸ್ಟಿಕ್ಸ್‌, ರಿನಿವೇಬಲ್‌ ಎನರ್ಜಿ, ಏರೋಸ್ಪೇಸ್‌ ಮತ್ತು ರಕ್ಷಣೆ ಮತ್ತು ವಿದ್ಯುತ್‌ ವಾಹನ