ಬೆಂಗಳೂರು(ಜು.25): ನಗರದ ಕಂಟೈನ್ಮೆಂಟ್‌ ವಲಯಗಳಲ್ಲಿ ಒಟ್ಟು 5.3ಲಕ್ಷ ಕುಟುಂಬಗಳು ವಾಸ ಮಾಡುತ್ತಿವೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕಂಟೈನ್ಮೆಂಟ್‌ ವಲಯಗಳಲ್ಲಿ ವಾಸ ಮಾಡುತ್ತಿರುವ ಜನರಿಗೆ ಆಹಾರ ಪೂರೈಕೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಬಿಬಿಎಂಪಿ ಪರ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿ ಈ ಮಾಹಿತಿ ನೀಡಿದರು.

ರಾಜ್ಯದಲ್ಲಿ ಸತತ 2ನೇ ದಿನ 5000+ ಕೊರೋನಾ ಕೇಸ್‌: ದಾಖಲೆಯ ಡಿಸ್ಚಾರ್ಜ್!

ನಗರದಲ್ಲಿ 9,962 ಸಕ್ರಿಯ ಕಂಟೈನ್ಮೆಂಟ್‌ ವಲಯಗಳಿವೆ. ಅವುಗಳಲ್ಲಿ 5.3 ಲಕ್ಷ ಕುಟುಂಬಗಳು ವಾಸ ಮಾಡುತ್ತಿವೆ. 15,642 ಮನೆಗಳಲ್ಲಿ ಹಿರಿಯ ನಾಗರಿಕರಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ 5,536 ಮನೆಗಳಿವೆ. ಎಂದು ಬಿಬಿಎಂಪಿ ಹೈಕೋರ್ಟ್‌ ಗೆ ತಿಳಿಸಿದೆ.

ಅಲ್ಲದೆ, ಕಂಟೈನ್ಮೆಂಟ್‌ ವಲಯಗಳಲ್ಲಿ ಎಲ್ಲ ಕುಟುಂಬಗಳಿಗೆ ಆಹಾರ ಒದಗಿಸುವುದು ತನ್ನ ಕರ್ತವ್ಯವಾಗಿದೆ. ಅದಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 53,000 ಆಹಾರ ಕಿಟ್‌ ಅಗತ್ಯವಿದೆ.

ಕೊರೋನಾ ಸೋಂಕಿತಳ ಮೃತದೇಹ ನೀಡಲು 9 ಲಕ್ಷ ಕೇಳಿದರು!

ಈಗಾಗಲೇ 8 ಸಾವಿರ ಕಿಟ್‌ ಗಳನ್ನು ವಿತರಿಸಲಾಗಿದೆ. ಉಳಿದವರಿಗೆ ಕಿಟ್‌ ವಿತರಣೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ನ್ಯಾಯಪೀಠಕ್ಕೆ ಭರವಸೆ ನೀಡಿದರು. ಆ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.