ಚಿಕ್ಕಮಗಳೂರು [ಡಿ.06]: ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಜಿಲ್ಲೆಯಲ್ಲಿ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. 

ಡಿಸೆಂಬರ್ 9ರ ಮದ್ಯರಾತ್ರಿಯಿಂದಲೇ ಎಲ್ಲಾ ಬಾರ್ ಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ. ಡಿ. 13ರ ಬೆಳಗಿನವರೆಗೂ ಕೂಡ ಯಾವುದೇ ರೆಸ್ಟೊರೆಂಟ್ ಗಳಲ್ಲಿಯೂ ಮದ್ಯ ಮಾರಾಟ ಹಾಗೂ ಸಂಗ್ರಹ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಗೌತಮ್ ಬಗಾದಿ ಆದೇಶ ನೀಡಿದ್ದಾರೆ. 

ಡಿಸೆಂಬರ್ 11 ಮತ್ತು 12 ರಂದು ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ ಮಾಡಲೂ ನಿರ್ಬಂಧ ವಿಧಿಸಲಾಗಿದೆ. 11 ರಂದು ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾ ಯಾತ್ರೆ ನಡೆಯುವ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ. 

ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಗರದ ಎಂ.ಜಿ ರಸ್ತೆ, ಬಸವನಹಳ್ಳಿ ರಸ್ತೆ, ಕೆಇಬಿ, ಕಾಮದೇನು ಗಣಪತಿ ದೇವಸ್ಥಾನದ ಮಾರ್ಗದಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. 

ಇನ್ನು ಮೂರು ದಿನಗಳ ಕಾಲ ಇಲ್ಲಿನ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರಳಲು ಪ್ರವಾಸಿಗರಿಗೆ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ಆದೇಶಿಸಿದ್ದಾರೆ.