ಬಂಟ್ವಾಳ: ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ ವಿದ್ಯಾರ್ಥಿಗಳು..!

ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ವಿದ್ಯಾರ್ಥಿನಿಯರು.

5 Pairs of Twin Students in the same class at Bantwal in  Dakshina Kannada grg

ಬಂಟ್ವಾಳ(ಅ.05):  ತಾಲೂಕಿನ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ತಾಲೂಕಿನ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ವಿದ್ಯಾರ್ಥಿನಿಯರು.

ಚಿಕ್ಕಬಳ್ಳಾಪುರ: ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಾತೆ

ಇಲ್ಲಿ ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಾಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಮೂರ್ಖರಾಗುವ ಸಂದರ್ಭಗಳು ಕೂಡ ಬಂದಿವೆಯಂತೆ.

ಅವಳಿ ಜವಳಿ ಸೋದರರು-ಸೋದರಿಯರು ಒಂದೇ ತರಗತಿಯಲ್ಲಿ ಒಂದೆರಡು ಕಂಡು ಬಂದ ಉದಾಹರಣೆಗಳಿವೆ. ಆದರೆ ಇದೇ ಮೊದಲ ಬಾರಿಗೆ ಒಂದೇ ತರಗತಿಯಲ್ಲಿ ಐದು ಅವಳಿ ಜವಳಿ ವಿದ್ಯಾರ್ಥಿಗಳಿರುವುದು ವಿಶೇಷವೇ ಸರಿ. ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎಂಬುದು ಇಲ್ಲಿ ಉಲ್ಲೇಖನೀಯ.

Latest Videos
Follow Us:
Download App:
  • android
  • ios