Yadgir| ಹಾಸ್ಟೆಲ್‌ನಲ್ಲಿ ತಯಾರಿಸಿದ ಉಪ್ಪಿಟ್ಟಿನಲ್ಲಿ ಸತ್ತ ಹಾವು: 5 ವಿದ್ಯಾರ್ಥಿಗಳು ಅಸ್ವಸ್ಥ

*  ಯಾದಗಿರಿ ತಾಲೂಕಿನ ಅಬ್ಬೆತುಮಕೂರು ಗ್ರಾಮದಲ್ಲಿ ನಡೆದ ಘಟನೆ 
*  ಉಪಾಹಾರದಲ್ಲಿ ಸತ್ತುಬಿದ್ದ ವಿಷಜಂತು ಪತ್ತೆ: ವಿದ್ಯಾರ್ಥಿಗಳು ಅಸ್ವಸ್ಥ, ಚಿಕಿತ್ಸೆ
*  ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು
 

5 Students Ill after Had Breakfast in Yadgir grg

ಯಾದಗಿರಿ(ನ.19):  ತಾಲೂಕಿನ ಅಬ್ಬೆತುಮಕೂರು ಮಠದ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ನಿಲಯದಲ್ಲಿ(Hostel) ಗುರುವಾರ ಬೆಳಿಗ್ಗೆ ತಯಾರಿಸಿದ ಉಪಹಾರದಲ್ಲಿ(Breakfast) ಸತ್ತುಬಿದ್ದ ಸತ್ತ ಹಾವು ಪತ್ತೆಯಾಗಿದ್ದು, ಉಪಾಹಾರ ಸೇವಿಸಿದ ಐವರು ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿ, ಕೆಲವರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಹುಲ್‌, ಮಲ್ಲಪ್ಪ, ವಿಶ್ವಕರ್ಣ, ಬಸವರಾಜ, ಯುವರಾಜ ವಿದ್ಯಾರ್ಥಿಗಳು(Students) ತಲೆ ಸುತ್ತು, ವಾಂತಿಯಿಂದ ಅಸ್ವಸ್ಥರಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ(Treatment) ನೀಡಲಾಗುತ್ತಿದೆ.

50 ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಪಾಸಣೆ:

ಉಪಾಹಾರ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯವನ್ನು ತಪಾಸಣೆ(Health Checkup) ಮಾಡಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಮಾತ್ರ ತಲೆ ಸುತ್ತು, ವಾಂತಿಯಿಂದ ಅಸ್ವಸ್ಥರಾಗಿದ್ದಾರೆ. ಉಳಿದವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರು(Doctor) ಮಾಹಿತಿ ನೀಡಿದರು.

Medical Education| ಹೊಸ ಸರ್ಕಾರಿ ಮೆಡಿಕಲ್‌ ಕಾಲೇಜು ಪ್ರವೇಶಾತಿಗೆ ಅನುಮತಿ ನಿರಾಕರಣೆ

ಶಾಸಕರ ಭೇಟಿ:

ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ(Venkatreddy Mudnal) ಅವರು ವಿಷಯ ತಿಳಿಯುತ್ತಲೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರಿಂದ ಮಾಹಿತಿ ಪಡೆದ ಅವರು, ಸದ್ಯಕ್ಕೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿಲ್ಲ. ಬಹುಶಃ ಉಪ್ಪಿಟ್ಟುನಲ್ಲಿ ಪತ್ತೆಯಾಗಿರುವ ಹಾವಿನ ಮರಿ ಸತ್ತದ್ದಾಗಿದೆ. ಉಪಾಹಾರ ತಯಾರಿಸುವ ವೇಳೆ ಸ್ವಚ್ಛತೆ ಕಾಪಾಡದ ಕಾರಣ ಇದು ಸಂಭವಿಸಿರುವ ಸಾಧ್ಯತೆ ಇದೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಮುಂದೆಯೂ ವಸತಿ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲನೆ ಮಾಡಲಾಗುವುದು. ಈಗಾಗಲೇ ಹಲವು ವಸತಿನಿಲಯಗಳಿಗೆ ಭೇಟಿ ನೀಡಲಾಗಿದೆ’ ಎಂದರು. ಇದಕ್ಕೂ ಮೊದಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಉಪಾಹಾರ ಸೇವಿಸುವ ವೇಳೆ ಒಬ್ಬ ವಿದ್ಯಾರ್ಥಿ ತಟ್ಟೆಯಲ್ಲಿ ಹಾವಿನ ಮರಿ ಪತ್ತೆಯಾಗಿದೆ. ಇದನ್ನು ಸೇವಿಸಿದ ನಂತರ ತಲೆ ಸುತ್ತು ಬಂದಿದೆ. ನಂತರ ಎಲ್ಲರಿಗೂ ಹೇಳಿದ ನಂತರ ಉಪಾಹಾರ ಬಿಟ್ಟು ಆಸ್ಪತ್ರೆಗೆ ಬಂದಿದ್ದಾರೆ’ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಜೀವಕುಮಾರ ರಾಯಚೂರಕರ್‌ ಮಾತನಾಡಿ, ’ಉಪಾಹಾರ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯ ಮೇಲೆ ನಿಗಾ ಇರಿಸಲಾಗಿದೆ. ಯಾರಿಗೂ ಜೀವಕ್ಕೆ ಅಪಾಯವಿಲ್ಲ. ಮಕ್ಕಳ ನಿಗಾ ಘಟಕದಲ್ಲಿ ಆರೈಕೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ನಿಮ್ಮಪ್ಪನ ನೋಡಿ ಕಲಿತುಕೊಳ್ಳಿ : ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಮುಖಂಡ

ಕಲುಷಿತ ನೀರು ಸೇವಿಸಿ ವಾಂತಿ ಭೇದಿ: ಗರ್ಭಿಣಿ ಸಾವು, 60 ಜನ ಅಸ್ವಸ್ಥ

ಕಳೆದ ವರ್ಷ ಕಲಬುರಗಿ(Kalaburagi) ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರ. ಬಿ ಗ್ರಾಮದಲ್ಲಿ ನಾಲ್ಕು ದಿನಗಳಿಂದ 60ಕ್ಕೂ ಅಧಿಕ ಜನರಿಗೆ ವಾಂತಿಭೇದಿ ಹರಡಿದ್ದರಿಂದ ಜನರಲ್ಲಿ ಭೀತಿ ಮೂಡಿಸಿದೆ. ಏತನ್ಮಧ್ಯೆ ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಗರ್ಭಿಣಿಯೊಬ್ಬರು ಮೃತಪಟ್ಟಿದ್ದರು(Death).

ಸುಜಾತಾ ಭೀಮರಾಯ ಎಂಬ ಎಂಟು ತಿಂಗಳ ಗರ್ಭಿಣಿ ಸಕಾಲಕ್ಕೆ ಚಿಕಿತ್ಸೆ ದೊರೆಯದೇ ಮೃತಪಟ್ಟಿದ್ದರು ಎಂದು ಹೇಳಲಾಗಿತ್ತು. ಎರಡು ವರ್ಷದ ಮಗುವಿನಿಂದ 80 ವರ್ಷದ ವೃದ್ಧರವರೆಗೆ, ಮಹಿಳೆಯರು, ಮಕ್ಕಳಿಗೆ ವಾಂತಿ ಭೇದಿ ಹರಡಿದೆ. ಗ್ರಾಮದಲ್ಲಿರುವ ಖಾಸಗಿ ವೈದ್ಯರೇ ವಾಂತಿ ಭೇದಿ ಹರಡಿದ ಗ್ರಾಮಸ್ಥರಿಗೆ ತಮ್ಮ ಮನೆಯಲ್ಲಿನ ಕ್ಲಿನಿಕ್‌ನಲ್ಲಿ ಹಗಲು ರಾತ್ರಿ ಚಿಕಿತ್ಸೆ ನೀಡಿದ್ದರು. 

ನೂತನ ವಿಜಯನಗರ ಜಿಲ್ಲೆಯಲ್ಲಿ ನೀರಿನಿಂದ ಸರಣಿ ಸಾವು: ಪರಿಹಾರ ಘೋಷಿಸಿದ ಸಿಎಂ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಘೋಷಿಸಿದ್ದರು.  
 

Latest Videos
Follow Us:
Download App:
  • android
  • ios