Asianet Suvarna News Asianet Suvarna News

ಕೊರೋನಾದಿಂದ ಮೃತರಾದರೆ 50 ಲಕ್ಷ ರು. ಪರಿಹಾರ

ಕೊರೋನಾ ಮಹಾಮಾರಿ ವಿಶ್ವದಾದ್ಯಂತ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರಿಂದ ಕೋಟಿ ಕೋಟಿ ಜನ ತತ್ತರಿಸುತ್ತಿದ್ದು, ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

50 lakh compensation For Corona victims Family Who Served As govt Employee
Author
Bengaluru, First Published Sep 10, 2020, 2:53 PM IST

ಹಿರಿಯೂರು (ಸೆ.10): ಕೋವಿಡ್‌-19 ಸೋಂಕಿನಿಂದ ಮೃತಪಟ್ಟಸರ್ಕಾರಿ ನೌಕರರಿಗೆ ರು. 50 ಲಕ್ಷ ಪರಿಹಾರ ನೀಡುವುದೂ ಸೇರಿ ಸರ್ಕಾರಿ ನೌಕರರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಷಡಕ್ಷರಿ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿದ್ದ ಸಮಾಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವಲ್ಲಿ ಕೆಲವು ಇಲಾಖೆಗಳಲ್ಲಿ ವಿಳಂಬ ಮಾಡಲಾಗುತ್ತಿತ್ತು. ಇಲಾಖಾ ಮುಖ್ಯಸ್ಥರ, ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ತಂದು ಆರೋಗ್ಯ, ಕಂದಾಯ ಮುಂತಾದ ಇಲಾಖೆಗಳ ನೌಕರರಿಗೆ ಬಡ್ತಿ ಕೊಡಿಸಲಾಗಿದೆ. ಉಳಿದ ಇಲಾಖೆಗಳ ಕಡೆಗೂ ಗಮನ ಹರಿಸಲಾಗಿದೆ ಎಂದು ಭರವಸೆ ನೀಡಿದರು.

ಕರ್ನಾಟಕದಲ್ಲಿ ಬುಧವಾರ ದಾಖಲೆ ಬರೆದ ಕೊರೋನಾ ಸಂಖ್ಯೆ

ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಮಂಜುನಾಥ್‌ ಮಾತನಾಡಿ, ಷಡಕ್ಷರಿ ಅವರು ಸರ್ಕಾರಿ ನೌಕರರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮತ್ತು ಜಿಲ್ಲೆಯಲ್ಲಿ ಜಂಟಿ ಸಮಾಲೋಚನಾ ಸಮಿತಿ ರಚಿಸಿ ಸಹಾಯ ಮಾಡಿದ್ದಾರೆ. ಅತ್ಯುತ್ತಮ ನೌಕರ ಭವನವನ್ನು ನಿರ್ಮಾಣ ಮಾಡುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಸರ್ಕಾರಿ ನೌಕರರಿಗೆ ಎಲ್ಲ ಜಿಲ್ಲೆಗಳಲ್ಲಿ ಕ್ಯಾಂಟೀನ್‌ ನಿರ್ಮಿಸಲು ಉತ್ಸುಕರಾಗಿದ್ದಾರೆ ಎಂದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಶಿವಾನಂದ ಮಾತನಾಡಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ನೌಕರರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುತ್ತಿರುವುದರಿಂದ ಬಡ್ತಿ ಅವಕಾಶ ದೊರೆಯಿತು ಎಂದರು.

Follow Us:
Download App:
  • android
  • ios