ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಸುಮಾರು 1 ಕೋಟಿ ರುಪಾಯಿಗೂ ಹೆಚಿನ ಮೌಲ್ಯದ 51 ಕೆ.ಜಿ. ಆನೆ ದಂತಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. 

ಬೆಳ್ತಂಗಡಿ [ಸೆ.19] : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಸುಮಾರು 1 ಕೋಟಿ ರುಪಾಯಿಗೂ ಹೆಚಿನ ಮೌಲ್ಯದ 51 ಕೆ.ಜಿ. ಆನೆ ದಂತಗಳನ್ನು ಪುತ್ತೂರು ಸಂಚಾರಿ ಅರಣ್ಯ ದಳ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. 

ಖಚಿತ ಮಾಹಿತಿ ಮೇರೆಗೆ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿ 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಅಬ್ರಾಹಂ, ಅನ್ವರ್‌, ಸುರೇಶ್‌ ಬಾಬು ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಕಳೆದ ಮೂರು ತಿಂಗಳಿಂದ ಆನೆ ದಂತ ದಾಸ್ತಾನು ಇರಿಸಿದ್ದು ಮಾತ್ರವಲ್ಲದೆ ಮಾರಾಟ ಜಾಲದ ಕುರಿತು ಇಲಾಖೆಗೆ ಲಭಿಸಿದ್ದ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಲಾಗಿತ್ತು.