ಮಂಗಳೂರು/ಉಡುಪಿ(ಆ.11): ಕೊರೋನಾ ಪಾಸಿಟಿವ್‌ ಕೇಸ್‌ಗಿಂತ ಡಿಸ್ಚಾರ್ಜ್‌ ಆದವರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಮೂಲಕ ಸೋಮವಾರದ ಹೆಲ್ತ್‌ ಬುಲೆಟಿನ್‌ ದ.ಕ. ಜಿಲ್ಲೆಯ ಮಟ್ಟಿಗೆ ತುಸು ನೆಮ್ಮದಿ ನೀಡಿದೆ. ಇದೇ ವೇಳೆ 146 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಎಂಟು ಮಂದಿ ಸಾವಿಗೀಡಾಗಿದ್ದಾರೆ. ಆಸ್ಪತ್ರೆಯಿಂದ 533 ಮಂದಿ ಬಿಡುಗಡೆಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸೋಮವಾರ 90 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6291ಕ್ಕೇರಿದೆ. ಅಲ್ಲದೆ ಕೊರೋನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಇದುವರೆಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 66 (ಶೇ.1.04) ಆಗಿದೆ.

ಬೆಳ್ತಂಗಡಿ: ಭಾರೀ ಮಳೆಗೆ ಕಾಡಿನಲ್ಲಿ 6 ಎಕರೆ ಗುಡ್ಡೆ ಕುಸಿತ

ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ 4, ಬೆಳ್ತಂಗಡಿ 1 ಮತ್ತು ಇತರ ಜಿಲ್ಲೆಯ ಮೂವರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 228 ತಲುಪಿದೆ.

ಸೋಮವಾರ ಪತ್ತೆಯಾದ ಪಾಸಿಟಿವ್‌ ಕೇಸ್‌ಗಳ ಪೈಕಿ 81 ಸಾಮಾನ್ಯ ಶೀತಜ್ವರ ಪ್ರಕರಣ, ಅಂತಾರಾಷ್ಟ್ರೀಯ ಪ್ರಯಾಣ ಮಾಡಿದ ನಾಲ್ಕು ಮಂದಿ, 16 ಉಸಿರಾಟ ಸಮಸ್ಯೆಯ ಪ್ರಕರಣ ಪತ್ತೆಯಾಗಿದ್ದು, 15 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. 30 ಮಂದಿಯ ಸೋಂಕಿನ ಮೂಲವನ್ನು ಇನ್ನಷ್ಟೇ ಪತ್ತೆಹಚ್ಚಬೇಕಿದೆ.

ಕಾಲಿನಲ್ಲಿ ಪರೀಕ್ಷೆ ಬರೆದ ಕೌಶಿಕ್‌ ಫಸ್ಟ್‌ ಕ್ಲಾಸ್‌ ಪಾಸ್‌

ದ.ಕ. ಜಿಲ್ಲೆಯಲ್ಲಿ ಇದುವರೆಗೆ 7,353 ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 4,215 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2,910 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸೋಮವಾರ 117 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಇದುವರೆಗೆ ಒಟ್ಟು 3462 (ಶೇ.55.03) ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿದ್ದಾರೆ. ಪ್ರಸ್ತುತ 2762 (ಶೇ.43.90) ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆಯಲ್ಲಿದ್ದಾರೆ.

ಉಡುಪಿಯಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿ ಇಲ್ಲ

ಈ ನಡುವೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ 3 ಮಂದಿ ಮತ್ತು ಇತರ ಕೊವೀಡ್‌ ಆಸ್ಪತ್ರೆಗಳಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಮೃತರಲ್ಲಿ 46 ಮತ್ತು 89 ವರ್ಷದ ಮಹಿಳೆಯರು, 72 ವರ್ಷ, 79 ವರ್ಷ ಮತ್ತು 89 ವರ್ಷದ ಪುರುಷರು ಹಾಗೂ 14 ವರ್ಷದ ಬಾಲಕರಾಗಿದ್ದಾರೆ.

ಹೆಚ್ಚು ಪರೀಕ್ಷೆ - ಹೆಚ್ಚು ಪಾಸಿಟಿವ್‌

ಜಿಲ್ಲೆಯಲ್ಲಿ ಈಗ ಹೆಚ್ಚೆಚ್ಚು ಮಂದಿಯನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಆದ್ದರಿಂದ ಹೆಚ್ಚೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ, ಹೊರತು ಶೇಕಡವಾರು ಪ್ರಮಾಣ ಹೆಚ್ಚಾಗಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಹೇಳಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ಹರಡುವ ಸಂಭವ ಇರುವ ಫ್ಯಾಕ್ಟರಿ, ಸಂಸ್ಥೆಗಳ ಸಿಬ್ಬಂದಿಯನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಕಾರ್ಯಕರ್ತರಿಗೂ ಸಾಕಷ್ಟುಸಂಖ್ಯೆಯಲ್ಲಿ ಸೋಂಕು ಪತ್ತೆಯಾಗುತ್ತಿದೆ ಎಂದವರು ಹೇಳಿದ್ದಾರೆ.

ದ.ಕ.-10-08-2020

ಒಟ್ಟು ಸೋಂಕಿತರು-7,353

ಗುಣಮುಖರಾದವರು-4,215

ಸಾವಿಗೀಡಾದವರು-228

ಚಿಕಿತ್ಸೆ ಪಡೆಯುತ್ತಿರುವವರು-2,910