ಬೀದರ್: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 59 ವಿದ್ಯಾರ್ಥಿಗಳು ಅಸ್ವಸ್ಥ
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿಂಬೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 59 ಮಕ್ಕಳಿಗೆ ತಲೆ ಸುತ್ತು, ವಾಂತಿ ಭೇದಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಹುಮನಾಬಾದ್(ಜೂ.25): ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಬೆನ್ನಲ್ಲಿಯೇ ಹುಮನಾಬಾದ್ ತಾಲೂಕಿನ ನಿಂಬೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 59 ಮಕ್ಕಳಿಗೆ ತಲೆ ಸುತ್ತು, ವಾಂತಿ ಭೇದಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸೇರಿದ ಘಟನೆ ವರದಿಯಾಗಿದೆ.
ಶಾಲೆಯಲ್ಲಿ ಒಟ್ಟು 94 ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವನೆ ಮಾಡಿದ್ದರು. ಶುಕ್ರವಾರ ಸಂಜೆ 5ರ ಹೊತ್ತಿಗೆ ಕೆಲ ಮಕ್ಕಳಲ್ಲಿ ತಲೆನೋವು, ವಾಂತಿ ಭೇದಿ ಹಾಗೂ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದಂತೆ ಅಸ್ವಸ್ಥ ಮಕ್ಕಳನ್ನು ಹುಮನಾಬಾದ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಕ್ಕಳ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಬೀದರ್: ಕಲುಷಿತ ನೀರು ಸೇವನೆ, 20ಕ್ಕೂ ಹೆಚ್ಚು ಜನ ಅಸ್ವಸ್ಥ
ಶಾಸಕರ ಭೇಟಿ:
ಶಾಸಕ ಡಾ.ಸಿದ್ದು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ್ ಪಾಟೀಲ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೇರಿ ಅಧಿಕಾರಿ ವರ್ಗ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ವೈದ್ಯಾಧಿಕಾರಿಯೊಂದಿಗೆ ಚರ್ಚಿಸಿದರು.