ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲೆಯಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಬೆಳಗಾವಿ, [ಡಿ.04]: ಲಾರಿ ಮತ್ತು ಬೊಲೆರೋ ಕಾರು ನಡುವೆ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟ ದುರ್ಘಟನೆ ಇಂದು [ಮಂಗಳವಾರ] ಬೆಳಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹೀರೆನಂದಿ ಗ್ರಾಮದಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂಬಂಧಿಕರೋರ್ವರ ಅಂತ್ಯಕ್ರಿಯೆ ಮುಗಿಸಿ ವಾಪಸ್ ಹೋಗುತ್ತಿದ್ದ ವೇಳೆ ಹಿರೇನಂದಿ ಗ್ರಾಮದ ಬಳಿ ಕಬ್ಬು ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಣಾಮ ಕಾರಿನಲ್ಲಿದ್ದ ಆರೂ ಮಂದಿ ಸಾವನ್ನಪ್ಪಿದ್ದಾರೆ.
ಗೋಕಾಕ್ ತಾಲೂಕಿನ ಯರಗವಿ ನಿವಾಸಿಗಳಾದ ಯಲ್ಲವ್ವ (60), ನೀಲವ್ವ (40), ಅನಸೂಯಾ ನಾಯ್ಕರ್ (28), ಪಾರವ್ವಾ ಖಂಡ್ರಿ (30), ಭೀಮಸೇನಪ್ಪ ಪೂಜಾರಿ ( 28), ಮಹಾದೇವ (30) ಮೃತಪಟ್ಟಿದ್ದು, 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
