ಮೈಸೂರು ಜಾನುವಾರುಗಳ ಸಂರಕ್ಷಣೆಗಾಗಿ ಚಿಕ್ಕಮಗಳೂರಿನಲ್ಲಿ 64 ಆ್ಯಂಬುಲೆನ್ಸ್ ಲೋಕಾರ್ಪಣೆ

ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗಾಗಿ 64 ಆ್ಯಂಬುಲೆನ್ಸ್ ಗಳನ್ನು ಚಿಕ್ಕಮಗಳೂರು  ನಗರದಲ್ಲಿ ರಾಜ್ಯ ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಲೋಕಾರ್ಪಣೆಗೊಳಿಸಿದರು.

64 Ambulances Dedicated in Chikkamagaluru for Cattle Protection gow

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿಕ್ಕಮಗಳೂರು (ಮಾ.19): ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗಾಗಿ 64 ಆ್ಯಂಬುಲೆನ್ಸ್ ಗಳನ್ನು ಚಿಕ್ಕಮಗಳೂರು  ನಗರದಲ್ಲಿ ರಾಜ್ಯ ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಲೋಕಾರ್ಪಣೆಗೊಳಿಸಿದರು. ಚಿಕ್ಕಮಗಳೂರು ನಗರದ ಹೊರವಲಯವಾದ ಕದ್ರಿಮದ್ರಿಯಲ್ಲಿ  ನಡೆದ ಕಾರ್ಯಕ್ರಮದಲ್ಲಿ 64 ಆ್ಯಂಬುಲೆನ್ಸ್ ಗಳು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು ಕರ್ನಾಟಕ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಕರ್ನಾಟಕದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈವರೆಗೆ 3 ಸಾವಿರ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಹೇಳಿದರು.

ಗೋ ಹತ್ಯೆ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿ ಜಾರಿ:
ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಗೋಹತ್ಯೆ ನಿಷೇದ ಕಾನೂನಿನಲ್ಲಿ ದಮ್ ಇರಲಿಲ್ಲ, ಆಗ ಗೋ ಹಂತಕರಿಗೆ ಕೇವಲ ಒಂದು ಸಾವಿರ ರುಪಾಯಿ ದಂಡ ಹಾಗೂ 6 ತಿಂಗಳು ಮಾತ್ರ ಶಿಕ್ಷೆ ಇತ್ತು. ಇದನ್ನು 50 ಸಾವಿರದಿಂದ 5 ಲಕ್ಷದವರೆಗೆ ದಂಡ, 3ವರ್ಷ ಶಿಕ್ಷೆ ನೀಡಲು ತಿದ್ದುಪಡಿ ತರಲಾಯಿತು ಎಂದರು. ಕಸಾಯಿ ಖಾನೆಗಳಿಗೆ ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿದ್ದ ಸುಮಾರು 20 ಸಾವಿರಕ್ಕೂ ಹೆಚ್ಚು ಜಾನುವಾರುಗಳನ್ನು ಸಂರಕ್ಷಿಸಿ ಅವುಗಳನ್ನು ಗೋ ಶಾಲೆಗಳಿಗೆ ಕಳುಹಿಸಲಾಗಿದೆ. ಸುಮಾರು 3 ಸಾವಿರ ಕೇಸ್ಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದರು.

ವೈದ್ಯರ ಸಹಿತ ವಾಹನ ರೈತರ ಮನೆ ಬಾಗಿಲಿಗೆ:
ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಜನರಿಗೆ ತಲುಪಬೇಕು ಎಂಬ ಉದ್ದೇಶದಿಂದ ಫಲಾನುಭವಿಗಳ ಸಮಾವೇಶವನ್ನು ರಾಜ್ಯದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ.ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿಗಳ ಮೀಸಲಾತಿ ಹೆಚ್ಚಳ ಮಾಡಿದೆ. ರೈತರ ಮಕ್ಕಳಿಗೆ ವಿದ್ಯಾ ನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಬೆಂಗಳೂರಿನ ಪ್ರತಿಯೊಬ್ಬ ನಾಗರಿಕರಿಗೂ 1-2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೆಟ್ರೋ ಸೌಲಭ್ಯ!

ಪಶು ಸಂಜೀವಿನಿ 1962 ಗೋ ಮಾತೆಯ ಅನಾರೋಗ್ಯದ ಸಂದರ್ಭದಲ್ಲಿ  1962 ದೂರವಾಣಿ ಸಂಖ್ಯೆಗೆ ಕರೆ ಮಾಡಿದರೆ ಪಶು ಸಂಜೀವಿನಿ ವಾಹನ ವೈದ್ಯರ ಸಹಿತ ರೈತರ ಮನೆ ಬಾಗಿಲಿಗೆ ಹೋಗಿ ಚಿಕಿತ್ಸೆ ನೀಡಲಿದೆ ಎಂದರು.  ರಾಜ್ಯದ ಪ್ರತಿ ತಾಲೂಕು ಕೇಂದ್ರಕ್ಕೆ ಒಂದರಂತೆ 291  ಆ್ಯಂಬುಲೆನ್ಸ್ ನೀಡಲಾಗುವುದು. ಈ ಪೈಕಿ 275  ಪಶು ಸಂಚಾರಿ ಚಿಕಿತ್ಸಾ ವಾಹನಗಳು ನೀಡಲಾಗಿದೆ. ಇದು, ಕೇಂದ್ರ ಸರ್ಕಾರದ ಜನಪರ ಯೋಜನೆಯಾಗಿದೆ ಎಂದರು.

ಕೊಪ್ಪಳದಲ್ಲಿ ತಂದೆ ತಾಯಿ ಇಲ್ಲದ ಮಕ್ಕಳನ್ನು ದತ್ತು ಪಡೆದ ಗಾಲಿ ಜನಾರ್ಧನ ರೆಡ್ಡಿ!

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ ಜತೆಗೆ ಪ್ರಾಣಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಈ ಕೇಂದ್ರಗಳಿಗೆ ರಾಜ್ಯದಲ್ಲಿ ಈವರೆಗೆ ಸುಮಾರು ಒಂದು ಲಕ್ಷ ಕರೆಗಳು ಬಂದಿವೆ ಎಂದು ಹೇಳಿದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು, ಈಗ ಜಾರಿಗೆ ತಂದಿರುವ ಯೋಜನೆಗಳ ಜತೆಗೆ ಮತ್ತಷ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕರುಗಳಾದ ಸಿ.ಟಿ. ರವಿ, ಎಂ.ಪಿ. ಕುಮಾರಸ್ವಾಮಿ, ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು.ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪಾ ಸ್ವಾಗತಿಸಿದರು.

Latest Videos
Follow Us:
Download App:
  • android
  • ios