Ramanagara: ಶೇ.68ರಷ್ಟು ಇ-ಖಾತೆ ಪೂರ್ಣ: ಶಾಸಕಿ ಅನಿತಾ ಕುಮಾರಸ್ವಾಮಿ
ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಶಾಸಕಿಯಾದ ನಂತರ ಸಾಗುವಳಿ ಚೀಟಿ, ಹಕ್ಕು ಪತ್ರ ಕೊಡಿಸಿದ್ದೇನೆ. ಬೇರೆ ತಾಲೂಕುಗಳಿಗೆ ಹೋಲಿಕೆ ಮಾಡಿದರೆ ಅತಿ ಹೆಚ್ಚು ರಾಮನಗರ ತಾಲೂಕಿನಲ್ಲಿ ಶೇಕಡ 68ರಷ್ಟುಇ-ಖಾತೆ ಮಾಡಿಕೊಡಲಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ರಾಮನಗರ (ನ.30): ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಶಾಸಕಿಯಾದ ನಂತರ ಸಾಗುವಳಿ ಚೀಟಿ, ಹಕ್ಕು ಪತ್ರ ಕೊಡಿಸಿದ್ದೇನೆ. ಬೇರೆ ತಾಲೂಕುಗಳಿಗೆ ಹೋಲಿಕೆ ಮಾಡಿದರೆ ಅತಿ ಹೆಚ್ಚು ರಾಮನಗರ ತಾಲೂಕಿನಲ್ಲಿ ಶೇಕಡ 68ರಷ್ಟುಇ-ಖಾತೆ ಮಾಡಿಕೊಡಲಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು. ತಾಲೂಕಿನ ಕೈಲಾಂಚ ಗ್ರಾಮದಲ್ಲಿ ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ತಾಲೂಕು ಆಡಳಿತ ವತಿಯಿಂದ ಪಿಂಚಣಿ ಆದಾಲತ್ - ಇ ಖಾತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಲೂಕಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಪಿಂಚಣಿ, ಹಕ್ಕು ಪತ್ರ ಸೇರಿದಂತೆ ರೈತರ ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸುತ್ತಿದ್ದಾರೆಂದು ತಹಸೀಲ್ದಾರ್ ವಿಜಯ್ ಕುಮಾರ್ ಕಾರ್ಯವೈಖರಿಯನ್ನು ಶ್ಲಾಘಿಸಿದರು. ನಾನು ಶಾಸಕಿಯಾದ ನಂತರ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ಕೆಲಸ ಮಾಡಿದ್ದೇನೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಿ ಶಾಲೆಗಳ ಕಟ್ಟಡ ದುರಸ್ತಿ, ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಒತ್ತು ನೀಡಿದೆ. ಸುಮಾರು 40 ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ದೇವಸ್ಥಾನಗಳ ನಿರ್ಮಾಣಕ್ಕಾಗಿ 4 -5 ಕೋಟಿ ನೀಡಿದ್ದೇನೆ ಎಂದು ಹೇಳಿದರು.
ಅಳಿವಿನಂಚಿನಲ್ಲಿ ಬೊಂಬೆಯಾಟ: ಇತಿಹಾಸದ ಪುಟ ಸೇರುವ ಆತಂಕ
ತಹಸೀಲ್ದಾರ್ ಎಂ.ವಿಜಯಕುಮಾರ್ ಮಾತನಾಡಿ, ಸರ್ಕಾರದ ಯೋಜನೆಯನ್ನು ಪ್ರತೀ ಫಲಾನುಭವಿ ಮನೆಗೆ ತಲುಪಿಸುವ ಕೆಲಸ ತಾಲೂಕು ಆಡಳಿತ ಮಾಡುತ್ತಿದೆ. ವಯಸ್ಸಾಗಿದ್ದರೂ ವಯಸ್ಸಿನ ಜನನ ಪ್ರಮಾಣ ಪತ್ರದ ಕೊರತೆಯಿಂದ ಕೆಲವರಿಗೆ ಮಾಸಾಶನ ಕಡಿಮೆ ಬರುತ್ತಿತ್ತು. ಪಿಂಚಣಿ ಅದಾಲತ್ ಮೂಲಕ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ವೈದ್ಯರ ಪ್ರಮಾಣಪತ್ರ ಆಧಾರದ ಮೇಲೆ ಅರ್ಹ ಫಲಾನುಭವಿಗಳಿಗೆ 1200 ಮಾಸಾಶನ ದೊರೆಯುವಂತೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ತಾಪಂ ಇಒ ಪ್ರದೀಪ್, ಗ್ರಾಪಂ ಉಪಾಧ್ಯಕ್ಷ ವೆಂಕಟೇಶ್, ಚಂದ್ರಗಿರಿ, ಡಾ.ಮಣಿ, ಜೆಡಿಎಸ್ ತಾಲೂಕು ಅಧ್ಯಕ್ಷ ರಾಜಶೇಖರ್, ಮುಖಂಡರಾದ ಪಿ.ಅಶ್ವತ್ಥ, ಆರ್. ಪಾಂಡುರಂಗ, ದೊರೆಸ್ವಾಮಿ, ಬಿ.ಉಮೇಶ್, ರಾಜಣ್ಣ, ನಾಗರಾಜು ಮತ್ತಿತರರು ಹಾಜರಿದ್ದರು.
ಡಿ.16ರಂದು ಮಾಜಿ ಸಿಎಂ ಕುಮಾರಸ್ವಾಮಿ ಜನ್ಮದಿನ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜನ್ಮದಿನ ಡಿ.16ರಂದು ರಾಮನಗರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಧಾರ್ಮಿಕ ಕಾರ್ಯಕ್ರಮದೊಂದಿಗೆ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು. ಕುಮಾರಸ್ವಾಮಿ ಜನ್ಮದಿನದಂದೆ ಜೆಡಿಎಸ್ ಕೈಗೊಂಡಿರುವ ಪಂಚರತ್ನ ರಥಯಾತ್ರೆ ರಾಮನಗರ ಕ್ಷೇತ್ರ ಪ್ರವೇಶಿಸಲಿದೆ. ಅಂದು ಬೆಳಗ್ಗೆಯಿಂದ ಸಂಜೆವರೆಗೆ ರಥಯಾತ್ರೆ ಸಂಚರಿಸಿದ ನಂತರ ಸಂಜೆ ಶ್ರೀ ಶ್ರೀನಿವಾಸ ಕಲ್ಯಾಣದಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಲಿವೆ. ಸಹಸ್ರಾರು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುವುದು ಎಂದರು.
ನವ ಕರ್ನಾಟಕ ನಿರ್ಮಾಣಕ್ಕಾಗಿ ಜೆಡಿಎಸ್ ನಡೆಸುತ್ತಿರುವ ಪಂಚರತ್ನ ರಥಯಾತ್ರೆ ಸಂಚರಿಸಿದ ಕಡೆಗಳಲ್ಲಿ ಅಭೂತಪೂರ್ವ ಸ್ವಾಗತ ದೊರಕುತ್ತಿದೆ. ರಥಯಾತ್ರೆ ಯಶಸ್ವಿಯಾಗಿ ಸಾಗುತ್ತಿದ್ದು, ಡಿ.16ರಂದು ರಾಮನಗರ ಕ್ಷೇತ್ರ ಪ್ರವೇಶಿಸಲಿದೆ. ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ನಿಮ್ಮ ಮನೆ, ಮಗ ಕುಮಾರಸ್ವಾಮಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪರಿಪೂರ್ಣ ಪರಿಹಾರ ನೀಡಬಲ್ಲ ಪಂಚರತ್ನ ಕಾರ್ಯಕ್ರಮ ಮುಂದಿಟ್ಟುಕೊಂಡು ಮನೆ ಬಾಗಿಲಿಗೆ ಬರುತ್ತಿದ್ದಾರೆ. ರಥಯಾತ್ರೆಗೆ ಸಿಗುತ್ತಿರುವ ಅಭೂತಪೂರ್ವ ಸ್ಪಂದನೆ ನೋಡಿದರೆ ಕುಮಾರಸ್ವಾಮಿ ಬಗೆಗೆ ಜನರು ಎಷ್ಟುಒಲವು ಹೊಂದಿದ್ದಾರೆ ಎಂಬುದನ್ನು ತೋರಿಸುತ್ತಿದೆ ಎಂದರು.
Ramanagara: ತಾತ್ಕಾಲಿಕ ಸೇತುವೆ ನಿರ್ಮಾಣದಲ್ಲೂ ರಾಜಕೀಯ!
ಪ್ರತಿ ಮನೆ ಹೊಸಲಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಹಾಗೂ ಅಬಿವೃದ್ಧಿಗೊಂಡ ಸಶಕ್ತ, ರೈತ - ಕಾರ್ಮಿಕರ ಜೀವನ ಹಸನಾಗಿಸುವ, ಆರ್ಥಿಕವಾಗಿ ದುರ್ಬಲರಾಗಿರುವ ಪ್ರತಿ ಸಮುದಾಯಕ್ಕೆ ಒಳಿತು ಮಾಡುವುದು ಕುಮಾರಸ್ವಾಮಿಯವರ ಕನಸು. ಈ ಕನಸನ್ನು ನನಸು ಮಾಡಲು ಪಂಚರತ್ನ ಯೋಜನೆ ರೂಪಿಸಲಾಗಿದೆ. ಇದು ಸಾಕಾರಗೊಳ್ಳಲು ನಿಮ್ಮೆಲ್ಲರ ಆಶೀರ್ವಾದ ಬೇಕಿದೆ ಎಂದು ಹೇಳಿದರು.