ಶಾಲೆಯಲ್ಲಿನ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗಂವ್ಹಾರ ಬಳಿಯ ಮಾರಡಗಿ (ಎಸ್.ಎ) ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಜೇವರ್ಗಿ: ಶಾಲೆಯಲ್ಲಿನ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗಂವ್ಹಾರ ಬಳಿಯ ಮಾರಡಗಿ (ಎಸ್.ಎ) ಸರ್ಕಾರಿ ಶಾಲೆಯಲ್ಲಿ ನಡೆದಿದೆ. 1 ರಿಂದ 5ನೇ ತರಗತಿವರೆಗೆ ಇರುವ ಮಾರಡಗಿ ಶಾಲೆಯಲ್ಲಿ ಒಟ್ಟಾರೆ 116 ಮಕ್ಕಳಿದ್ದು, ಮಂಗಳವಾರ 68 ಮಕ್ಕಳು ಶಾಲೆಗೆ ಹಾಜರಾಗಿದ್ದರು. 

ಮಧ್ಯಾಹ್ನ ಬಿಸಿಯೂಟಕ್ಕೆ ಮಾಡಿದ್ದ ಅನ್ನ ಸಾರು ಸೇವಿಸಿದ ಮಕ್ಕಳಿಗೆ ಏಕಾಏಕಿ ವಾಂತಿ ಆರಂಭವಾಗಿದ್ದು, ಕೂಡಲೇ ಶಿಕ್ಷಕರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 50 ವಿದ್ಯಾರ್ಥಿಗಳಿಗೆ ಗಂವ್ಹಾರ ಆಸ್ಪತ್ರೆಯಲ್ಲಿ ಇನ್ನೂಳಿದ 18 ಮಂದಿಗೆ ಜೇವರ್ಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

 ಮಕ್ಕಳ ಬಿಸಿಯೂಟ ವಿಷಕಾರಿ ಆಗಲು ಕಲುಷಿತ ನೀರು, ದುರ್ವಾಸನೆ ಬಿರುವ ಖಾರದ ಪುಡಿ ಕಾರಣ ಎಂದು ಮಕ್ಕಳ ಪಾಲಕರು ಆರೋಪಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಸವರಾಜ ಪಾಟೀಲ್ ನರಿಬೋಳ ಆಸ್ಪತ್ರೆಗೆ ಆಗಮಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು.

1,500 ಕೋಟಿ ರೂಪಾಯಿ ನೆರವು ನೀಡಿದ್ರೂ, ಶಾಲೆಗಳಲ್ಲಿ ವಾರಪೂರ್ತಿ ಮೊಟ್ಟೆ ಸಿಗುತ್ತಿಲ್ಲ

ಬೆಂಗಳೂರು : ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು(ಎಸ್‌ಡಿಎಂಸಿ) ಕೈಗೊಂಡಿರುವ ಏಕಪಕ್ಷೀಯ ನಿರ್ಧಾರದಿಂದ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡುವ ಯೋಜನೆ ಸಮರ್ಪಕ ಅನುಷ್ಠಾನ ಆಗುತ್ತಿಲ್ಲ ಎಂದು ಅಜೀಂ ಪ್ರೇಮ್‌ ಜೀ ಫೌಂಡೇಷನ್ ಆರೋಪಿಸಿದೆ.

ಕೆಲ ಶಾಲೆಗಳಲ್ಲಿ ಆರು ದಿನದ ಬದಲು ಮೂರು ದಿನ, ಇನ್ನು ಕೆಲವೆಡೆ ಎರಡು ದಿನ ಮಾತ್ರ ಮೊಟ್ಟೆ ನೀಡಲಾಗುತ್ತಿದೆ. ಉಳಿದ ದಿನಗಳಲ್ಲಿ ಎಲ್ಲ ಮಕ್ಕಳಿಗೂ ಬಾಳೆಹಣ್ಣುಗಳನ್ನೇ ನೀಡಲಾಗುತ್ತಿದೆ. ಈ ಯೋಜನೆಗಾಗಿ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆಯಡಿ ₹1500 ಕೋಟಿ ಅನುದಾನ ಒದಗಿಸಿರುವ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನವರೇ(ಎಜಿಎಫ್‌) ರಾಜ್ಯಾದ್ಯಂತ ವಿವಿಧ ಶಾಲೆಗಳಿಗೆ ಭೇಟಿ ನೀಡಿ ನಡೆಸಿದ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ ಎಂದು ಫೌಂಡೇಷನ್ ಪ್ರಕಟಣೆ ತಿಳಿಸಿದೆ.

ಫೌಂಡೇಷನ್‌ ಸಿಬ್ಬಂದಿ ರಾಜ್ಯದ 762 ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ 568 ಶಾಲೆಗಳಲ್ಲಿ ಎಸ್‌ಡಿಎಂಸಿಯವರ ಅಮಮರ್ಪಕ ತೀರ್ಮಾನದಿಂದ ಮಕ್ಕಳಿಗೆ ಆರು ದಿನಗಳ ಬದಲು ಮೂರು, ಎರಡು ದಿನ ಮಾತ್ರ ಮೊಟ್ಟೆ ಸಿಗುತ್ತಿರುವುದು ಕಂಡುಬಂದಿದೆ. ಕೆಲ ಶಾಲೆಗಳಲ್ಲಿ ಪೋಷಕರ ಒಪ್ಪಿಗೆ ಪಡೆದೇ ಎಸ್‌ಡಿಎಂಸಿಯವರು ಸೋಮವಾರ, ಶನಿವಾರ ಮೊಟ್ಟೆ ವಿತರಿಸದೆ ಬಾಳೆ ಹಣ್ಣು ನೀಡುತ್ತಿದ್ದಾರೆ. ಆದರೆ, ಮಕ್ಕಳು ಮೊಟ್ಟೆಯನ್ನು ಇಷ್ಟಪಡುತ್ತಿದ್ದಾರೆ. ಇನ್ನು ಕೆಲವೆಡೆ ಮೂರು ದಿನ ಮೊಟ್ಟೆ, ಮೂರು ದಿನ ಬಾಳೆ ಹಣ್ಣು ನೀಡಲಾಗುತ್ತಿದೆ.