ಬೆಂಗಳೂರು(ಡಿ.19): ನಗರ ವ್ಯಾಪ್ತಿಯಲ್ಲಿ ಶುಕ್ರವಾರ 687 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 443 ಮಂದಿ ಗುಣಮುಖರಾಗಿದ್ದಾರೆ. ನಾಲ್ಕು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ಮೂಲಕ ನಗರದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 3,81,623ಕ್ಕೆ ಏರಿಕೆಯಾಗಿದ್ದು, ಗುಣಮುಖರ ಸಂಖ್ಯೆ 3,66,888ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,478ಕ್ಕೆ ಇಳಿಕೆಯಾಗಿದ್ದು, ಈ ಪೈಕಿ 106 ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕೊರೋನಾ ಬುಲೆಟಿನ್: ಕರ್ನಾಟದಲ್ಲಿ ಮೂರಂಕಿ ದಾಟಿದ ಸೋಂಕಿತರ ಸಂಖ್ಯೆ

ಶುಕ್ರವಾರ ನಗರದಲ್ಲಿ ನಾಲ್ಕು ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೆ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4256ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.