ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  

ಬೆಂಗಳೂರು(ಆ.13): ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಆದಿ ಲಕ್ಷ್ಮಮ್ಮ (69) ಮೃತ ದುರ್ದೈವಿ. 

ಅಪಘಾತ ಸಂಬಂಧ ಬಿಬಿಎಂಪಿ ಕಸದ ಲಾರಿ ಚಾಲಕ ಮೊಹಮ್ಮದ್ ಎಂಬಾತನ ವಶಕ್ಕೆ ಪಡೆದು ವಿಚಾರಣೆಗೆ ಒಳ ಪಡಿಸಲಾಗಿದೆ. ತಾಯಿ ಮತ್ತು ಮಗಳು ಚಿತ್ತೂರಿಗೆ ತೆರಳಲು ಸೋಮವಾರ ಬೆಳಗ್ಗೆ 6ಕ್ಕೆ ಜಂಬೂಸವಾರಿ ದಿಣ್ಣೆ ಬಸ್ ನಿಲ್ದಾಣದ ಬಳಿ ಬಂದಿದ್ದಾರೆ. 

20 ವರ್ಷದ ಯುವಕನ ಅತೀವೇಗದ ಚಾಲನೆಗೆ ಸೆಕ್ಯೂರಿಟಿ ಗಾರ್ಡ್ ಬಲಿ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಈ ವೇಳೆ ಬಸ್‌ ಬಂದ ತಕ್ಷಣ ಮಗಳು ಓಡಿ ಹೋಗಿ ಬಸ್ ಹತ್ತಿದ್ದಾರೆ. ಆದಿಲಕ್ಷ್ಮಮ್ಮ ಬಸ್‌ ಹತ್ತಲು ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದೆ.