ರೈತರಿಗೆ 7 ಗಂಟೆ ವಿದ್ಯುತ್ ಸರಬರಾಜು
ರೈತರಿಗೆ ಏಳು ಗಂಟೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್ ತಿಳಿಸಿದರು.
ಮೈಸೂರು : ರೈತರಿಗೆ ಏಳು ಗಂಟೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್ ತಿಳಿಸಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್‌್ಕ) ವತಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ರಾಜ್ಯದಲ್ಲಿ ಇಂಧನ ಇಲಾಖೆಯನ್ನು ಮತ್ತಷ್ಟುಸದೃಢಗೊಳಿಸುವ ಕೆಲಸ ಮಾಡುತ್ತಿದ್ದು, ವಿದ್ಯುತ್ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗಿದ್ದರೂ ಸರಬರಾಜು ಮಾಡುವ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುವುದು ಹಾಗೂ ಲೋಡ್ ಶೆಡ್ಡಿಂಗ್ ಇಲ್ಲದಂತೆ ವಿದ್ಯುತ್ ಅನ್ನು ಯಶಸ್ವಿಯಾಗಿ ಪೂರೈಕೆ ಮಾಡಲಾಗುತ್ತಿದೆ ಎಂದರು.
ರಾಜ್ಯದ ಎಲ್ಲ ಎಸ್ಕಾಂಗಳಲ್ಲಿ ರೈತರು, ಗ್ರಾಹಕರು ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ಗುಣಮಟ್ಟದ ಮತ್ತು ನಿರಂತರ ವಿದ್ಯುತ್ ಪೂರೈಕೆ ಮಾಡುವಲ್ಲಿ ನಿರತವಾಗಿದೆ. ನಾಡಿನ ಜನತೆಗೆ ಗುಣಮಟ್ಟದ ಮತ್ತು ನಿರಂತರ ವಿದ್ಯುತ್ ಸರಬರಾಜು ಮಾಡಲಾಗುವುದು. ಇದು ನಮ್ಮ ಆದ್ಯತೆಯಾಗಿದ್ದು, ರೈತರಿಗೆ ನಿಶ್ಚಿಂತವಾಗಿ 7 ಗಂಟೆ ವಿದ್ಯುತ್ ಪೂರೈಸಲಾಗುವುದು ಎಂದು ಅವರು ಭರವಸೆ ನೀಡಿದರು.
ರಾಜ್ಯದಲ್ಲಿ ಒಂದೂವರೆ ವರ್ಷಗಳಲ್ಲಿ 294 ಕಡೆ ಸಬ್ ಸ್ಟೇಷನ್ಗಳನ್ನು ಉನ್ನತೀಕರಣಗೊಳಿಸುವ ಜತೆಗೆ 50 ಕಡೆ ಹೊಸ ಸಬ್ ಸ್ಟೇಷನ್ಗಳನ್ನು ಆರಂಭಿಸಲಾಗಿದೆ. ಸೆಸ್‌್ಕ ವ್ಯಾಪ್ತಿಯ 5 ಜಿಲ್ಲೆಗಳಲ್ಲಿ 13 ಹೊಸ ಕಚೇರಿ ಉದ್ಘಾಟನೆ, 8 ಕಡೆ ವಿದ್ಯುತ್ ಉಪಕೇಂದ್ರ ಸ್ಥಾಪನೆ ಮಾಡುವ ಮೂಲಕ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಲಾಗಿದೆ ಎಂದರು.
ಇಲಾಖೆಯನ್ನು ಮತ್ತಷ್ಟುಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಳಕು ಯೋಜನೆ ಜಾರಿಗೆ ತರುವ ಮೂಲಕ ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ನೀಡಲಾಗಿದೆ. ಪ್ರಧಾನಿ ಮೋದಿ ಅವರು ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು ಎಂಬ ಕಲ್ಪನೆಯನ್ನು ಹುಟ್ಟು ಹಾಕಿದರು. ಅದರ ಭಾಗವಾಗಿ ರಾಜ್ಯದಲ್ಲಿ 2.5 ಲಕ್ಷ ಮನೆಗಳಿಗೆ ಒಂದೂವರೆ ವರ್ಷದ ಅವಧಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದರು.
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಅಮೃತಜ್ಯೋತಿ ಯೋಜನೆಯಡಿ ಎಸ್ಸಿ, ಎಸ್ಟಿಮನೆಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಈ ಕಾರ್ಯ ವೇಗವಾಗಿ ನಡೆಯುತ್ತಿದ್ದು, ನೋಂದಣಿ ಕಾರ್ಯ ನಡೆಯುತ್ತಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಬಂಧ ಕುಂದುಕೊರತೆ ಆಲಿಸಿ ಸಮಸ್ಯೆ ಬಗೆಹರಿಸುವ ಸಲುವಾಗಿ ತಿಂಗಳ ಮೂರನೇ ಶನಿವಾರ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಅದಾಲತ್ ಏರ್ಪಡಿಸುತ್ತ ಬರಲಾಗಿದೆ. ಇದರಿಂದ ಸಾಕಷ್ಟುಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹರಿಸುವ ಕೆಲಸ ನಡೆಯುತ್ತಿದೆ ಎಂದು ವಿವರಿಸಿದರು.
ವಿದ್ಯುತ್ ಬೇಡಿಕೆ ಹೆಚ್ಚಳ:
ರಾಜ್ಯದಲ್ಲಿ ಹಿಂದೆಂದು ಕಂಡುಬರದಷ್ಟುಬೇಡಿಕೆ ಕಳೆದ ಮಾಚ್ರ್ನಲ್ಲಿ ಇತ್ತು. 14800 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದ್ದಾಗಲೂ ಯಶಸ್ವಿಯಾಗಿ ವಿದ್ಯುತ್ ಪೂರೈಕೆ ಮಾಡಲಾಗಿದೆ. ಜನವರಿಯಲ್ಲೂ 14000 ಮೆಗಾವ್ಯಾಟ್ ವಿದ್ಯುತ್ಗೆ ಬೇಡಿಕೆ ಇದ್ದು, ಅದನ್ನೂ ಪೂರೈಕೆ ಮಾಡುವ ಕೆಲಸ ನಡೆಯುತ್ತಿದೆ. ಮುಂದಿನ ಮಾಚ್‌ರ್ ಏಪ್ರಿಲ್ನಲ್ಲಿ 15500 ರಿಂದ 16000 ಮೆಗಾವ್ಯಾಟ್ ಬೇಡಿಕೆ ಬರುವ ಸಾಧ್ಯತೆ ಇದೆ. ಇದನ್ನು ನಿರ್ವಹಣೆ ಮಾಡುವ ತಯಾರಿಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇಡೀ ರಾಜ್ಯದಲ್ಲಿ ಇಂಧನ ಇಲಾಖೆ 16 ಸಾವಿರ ಕೋಟಿ ಸಬ್ಸಿಡಿ ನೀಡುತ್ತಿದೆ. ಇದರ ಜೊತೆ ಜೊತೆಗೆ ಎಲ್ಲಾ ಎಸ್ಕಾಂಗಳು ಲಾಭದತ್ತ ಹೆಜ್ಜೆ ಇಡುವ ಪ್ರಯತ್ನ ಮಾಡುತ್ತಿವೆ. ಈ ಹಿಂದಿನ ಸರ್ಕಾರ 30 ಸಾವಿರ ಕೋಟಿ ಸಾಲವನ್ನು ಮಾಡಿ, ಎಸ್ಕಾಂಗಳನ್ನು ಮುಳುಗಿಸುವ ಕೆಲಸ ಮಾಡಿದ್ದವು. ಅದರಲ್ಲೂ ವಿಶೇಷವಾಗಿ ಹುಬ್ಬಳ್ಳಿ ಕಂಪನಿ ಉಳಿಯುವುದೇ ಕಷ್ಟಎಂಬಂತಾಗಿತ್ತು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು 9 ಸಾವಿರ ಕೋಟಿ ಅನುದಾನವನ್ನು ಮೊದಲ ಕಂತಿನಲ್ಲಿ ನೀಡಿದ್ದಾರೆ ಎಂದರು.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ. ದೇವೇಗೌಡ, ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಎಂಡಿಎ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಮೈಲ್ಯಾಕ್ ಅಧ್ಯಕ್ಷ ಆರ್. ರಘು, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಎಂ. ಶಿವಕುಮಾರ್, ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಸೆಸ್‌್ಕ ವ್ಯವಸ್ಥಾಪಕ ನಿರ್ದೇಶಕ ಜಯವಿಭವಸ್ವಾಮಿ, ನಿರ್ದೇಶಕ ಕೆ.ವಿ. ಉಮೇಶ್ ಚಂದ್ರ, ಮುಖ್ಯ ಇಂಜಿನಿಯರ್ ಮಹದೇವಸ್ವಾಮಿ ಪ್ರಸನ್ನ, ಕೆಇಬಿ ನೌಕರರ ಸಂಘದ ಅಧ್ಯಕ್ಷ ಆರ್.ಎಚ್. ಲಕ್ಷೀ್ಮಪತಿ, ಕೆ. ಶಿವಣ್ಣ, ಎಸ್.ಪಿ. ನಾಗೇಶ್, ಬಿ.ಗುರುಪ್ರಸಾದ್ ಮೊದಲಾದವರು ಇದ್ದರು.
ರಾಜ್ಯ ಲ್ಲಾ ಭಾಗಗಳಲ್ಲೂ ಕೆಟ್ಟುಹೋದ ಟಿಸಿಗಳ ಬದಲಾವಣೆ ಸಮಸ್ಯೆಗೆ ಮುಕ್ತಿ ನೀಡುವ ಸಲುವಾಗಿ ಟಿಸಿ ಸುಟ್ಟುಹೋದ 24 ಗಂಟೆಗಳಲ್ಲಿ ಹೊಸ ಟಿಸಿ ಅಳವಡಿಸುವ ನಿಯಮವನ್ನು ಜಾರಿ ಮಾಡಲಾಗಿದೆ. ಈ ಕಾರ್ಯ ಶೇ.90ರಷ್ಟುಯಶಸ್ವಿಯಾಗಿ ನಡೆಯುತ್ತಿದೆ. ಇದಕ್ಕೆ ಅಧಿಕಾರಿಗಳ ಶ್ರಮ ಸಾಕಷ್ಟಿದೆ.
- ವಿ. ಸುನಿಲ್‌ಕುಮಾರ್, ಇಂಧನ ಸಚಿವರು