ಬಾಗಲಕೋಟೆಯಲ್ಲಿ ಕೋಮುಗಲಭೆ: ಏಳು ಮಂದಿಗೆ ಗಾಯ

ಎರಡು ಮನೆಗಳ ಮೇಲೆ ಕಲ್ಲುತೂರಾಟ ನಡೆದಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಲಾಟೆ ವೇಳೆ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

7 Injured Due to Communal Riot in Bagalkot grg

ಬಾಗಲಕೋಟೆ(ಜೂ.22): ಬಾಗಲಕೋಟೆ ನವನಗರದಲ್ಲಿ ಬುಧವಾರ ತಡರಾತ್ರಿ ಎರಡು ಕೋಮುಗಳ ಯುವಕರ ನಡುವೆ ಗಲಾಟೆ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಎರಡು ಮನೆಗಳ ಮೇಲೆ ಕಲ್ಲುತೂರಾಟ ನಡೆದಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಲಾಟೆ ವೇಳೆ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆ ಎದುರು ಎರಡೂ ಕೋಮಿನ ಯುವಕರು ಜಮಾಯಿಸಿದ್ದಾರೆ. ಇದೇ ವೇಳೆ, ನಗರಸಭೆಯ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದು, 12 ಗಂಟೆಯೊಳಗಾಗಿ ತಪ್ಪಿತಸ್ಥರನ್ನು ಬಂಧಿಸುವಂತೆ ಪೊಲೀಸರನ್ನು ಆಗ್ರಹಿಸಿದ್ದರು. 

ದುಡ್ಡು ಕೊಡುತ್ತೇವೆಂದರೂ ಅಕ್ಕಿ ಕೊಡುತ್ತಿಲ್ಲ: ಕೇಂದ್ರದ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ

ಇದರಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಲಾಟೆಗೆ ನಿಖರ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. 

Latest Videos
Follow Us:
Download App:
  • android
  • ios