ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಕ್ರಾಸ್ ಬಳಿ ನಡೆದ ಘಟನೆ 

ಕಲಬುರಗಿ(ನ.27): ಕ್ರೂಸರ್ ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಏಳು ಜನರಿಗೆ ಗಾಯಗಳಾದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಕ್ರಾಸ್ ಬಳಿ ಇಂದು(ಭಾನುವಾರ) ನಡೆದಿದೆ. 

ಕ್ರೂಸರ್ ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ದಾವಣಗೆರೆ: ಅಪರಿಚಿತ ವಾಹನವೊಂದು ಡಿಕ್ಕಿ, ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಸಾವು

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.