ಮಂಗಳೂರು(ಮಾ.10): ಬಂಟ್ವಾಳ ತಾಲೂಕಿನ ತುಂಬೆ ವೆಂಟೆಡ್‌ ಡ್ಯಾಂ ಅನ್ನು ಏಳು ಮೀಟರ್‌ ಎತ್ತರಕ್ಕೆ ನೀರು ಸಂಗ್ರಹಿಸಲು ವಿನ್ಯಾಸ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

ಸೋಮವಾರ ಪ್ರಶ್ನೋತ್ತರ ಅವಧಿ ವೇಳೆ ಬಿಜೆಪಿಯ ರಾಜೇಶ್‌ ನಾಯಕ್‌ ಪ್ರಶ್ನೆಗೆ ಉತ್ತರಿಸಿದ ಅವರು, ತುಂಬೆ ವೆಂಟೆಡ್‌ ಡ್ಯಾಂ ಆರು ಮೀಟರ್‌ ಎತ್ತರಕ್ಕೆ ಹೆಚ್ಚಿಸಲಾಗಿದೆ. ಒಟ್ಟು ಏಳು ಮೀಟರ್‌ ಎತ್ತರಕ್ಕೆ ನೀರು ಸಂಗ್ರಹಿಸಲು ವಿನ್ಯಾಸ ಮಾಡಲಾಗಿದ್ದು, ಕಾರ್ಯರೂಪಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧವೇ 'ಕೈ' ಶಾಸಕ ಹ್ಯಾರಿಸ್‌ ಆಕ್ರೋಶ

ಡ್ಯಾಂನ ಹಿನ್ನೀರಿನಿಂದ ಒಟ್ಟು 66.43 ಎಕರೆ ಜಮೀನು ಮುಳುಗಡೆಯಾಗುತ್ತದೆ. ಮುಳುಗಡೆಯಾಗುವ ಜಮೀನನ್ನು ಜಿಲ್ಲಾಧಿಕಾರಿ ಮೂಲಕ ನೇರವಾಗಿ ಖರೀದಿಸಲಾಗಿದೆ. 37 ಭೂ ಮಾಲಿಕರಿಗೆ 9.87 ಕೋಟಿ ರು. ಪರಿಹಾರ ನೀಡಲಾಗಿದೆ. ಪರಿಹಾರ ನೀಡಲು ಸರ್ಕಾರವು 17 ಕೋಟಿ ರು. ಮೊತ್ತವನ್ನು ಬಿಡುಗಡೆ ಮಾಡಿದೆ.

Fact Check: ಚೀನಾ​ದಲ್ಲಿ ಸತ್ತ ಮನು​ಷ್ಯರನ್ನೇ ಕತ್ತ​ರಿಸಿ ಬೀಫ್ ಎಂದು ಮಾರಾ​ಟ!

54 ಸಂತ್ರಸ್ತರಿಗೆ ಪರಿಹಾರ ಪಾವತಿಸಲು ಬಾಕಿ ಇದೆ. ಭೂ ಒಡೆತನ ಕುರಿತು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಈ ಕುರಿತು ವಿಚಾರಣೆ ಹಂತದಲ್ಲಿದೆ. ಹೀಗಾಗಿ ಪರಿಹಾರ ನೀಡಲು ಸಾಧ್ಯವಾಗಿಲ್ಲ ಎಂದು ಮಾಹಿತಿ ನೀಡಿದರು.