Asianet Suvarna News Asianet Suvarna News

ಹೊಸಕೋಟೆ: ಸರ್ಕಾರಿ ಶಾಲೆಯಲ್ಲಿ ಕೊಳೆತ ಮೊಟ್ಟೆ ತಿಂದು 8 ಮಕ್ಕಳು ಅಸ್ವಸ್ಥ

ಅಸ್ವಸ್ಥತರಾದ 8 ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಕಳೆದೆರಡು ದಿನಗಳಿಂದ ಪ್ರೌಢಶಾಲೆ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೊಳೆತ ಮೊಟ್ಟೆಯನ್ನ ತಿಂದು 8 ಮಂದಿ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. 

8 Children Sick after Eating Rotten Eggs in Government School at Hosakote in Bengaluru Rural grg
Author
First Published Jan 12, 2024, 10:57 AM IST

ಹೊಸಕೋಟೆ(ಜ.12):  ಮಧ್ಯಾಹ್ನದ ಊಟ ತಿಂದ 8 ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಯ ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಿನ್ನೆ(ಗುರುವಾರ) ನಡೆದಿದೆ. 

ಅಸ್ವಸ್ಥತರಾದ 8 ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಕಳೆದೆರಡು ದಿನಗಳಿಂದ ಪ್ರೌಢಶಾಲೆ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೊಳೆತ ಮೊಟ್ಟೆಯನ್ನ ತಿಂದು 8 ಮಂದಿ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. 

ಬದುಕು ನರಕವಾಗಿಸುವ ನಶೆಗಳಿಂದ ದೂರವಿರಿ: ನಟಿ ಪೂಜಾಗಾಂಧಿ

ಅಸ್ವಸ್ಥವಾಗಿರುವ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಉಳಿದುಕೊಂಡಿರುವರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಊಟ ಮಾಡಿದ ನಂತರ ವಸತಿ ‌ನಿಲಯದಲ್ಲಿದ್ದ  ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ವಸತಿ ನಿಲಯದ ವಾರ್ಡನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.  ಸದ್ಯ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರೌಢಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯೇ ಕಾರಣ ಅಂತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. 

Follow Us:
Download App:
  • android
  • ios