ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇದೀಗ ಆತಂಕ ಎದುರಾಗಿದೆ. ಸತತವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅವರೀಗ ಹೋಮ್‌ ಕ್ವಾರಂಟೈನ್ ಆಗಿದ್ದಾರೆ. ಮನೆಯ 8 ಮಂದಿಗೆ ಕೊರೋನಾ ಸೋಂಕು ತಗುಲಿದೆ. 

ಬೆಳಗಾವಿ (ಏ.17): ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌, ಅವರ ಸಹೋದರ ಚನ್ನರಾಜ ಹಟ್ಟಿಹೊಳಿಗೆ, ಅವರ ತಾಯಿ, ಕಾರ್‌ ಚಾಲಕ ಮತ್ತು ಅಡುಗೆ ಸಿಬ್ಬಂದಿ ಸೇರಿದಂತೆ ಒಟ್ಟು 8 ಮಂದಿಗೆ ಶುಕ್ರವಾರ ಕೊರೋನಾ ಸೋಂಕು ದೃಢಪಟ್ಟಿದೆ.

ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿದಂತೆ ಎಲ್ಲರೂ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್‌ ಆಗಿದ್ದಾರೆ. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿನಂತಿಸಿದ್ದಾರೆ. 

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೊರೋನಾ, ಬೆಳಗಾವಿ ಪ್ರಚಾರದಲ್ಲಿದ್ದರು

ಕಳೆದ ಇಪ್ಪತ್ತು ದಿನಗಳಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಪರ ಬಿಡುವಿಲ್ಲದೇ ಪ್ರಚಾರ ನಡೆಸಿದ್ದರು. ಹೀಗಾಗಿ ಇವರ ಜೊತೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದವರಿಗೆ ಆತಂಕ ಶುರುವಾಗಿದೆ.

ಇನ್ನು ಉಳಿದಂತೆ ವಿಧಾನ ಸಭೆಯ ಉಪಾಧ್ಯಕ್ಷ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ಮತ್ತು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್‌ ಪಾಟೀಲ್‌ ಅವರಿಗೂ ಸೋಂಕು ದೃಢಪಟ್ಟಿದೆ.