ಶಿವಮೊಗ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆ ಸೋಂಕು ತೀವ್ರವಾಗಿ ಹರಡುತ್ತಿದೆ. ಇದೀಗ ಮತ್ತೆ 8 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಶಿವಮೊಗ್ಗ [ಜ.14] : ಜಿಲ್ಲೆಯಲ್ಲಿ ಮಂಗನ ಕಾಯಿಲೆ(ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್‌ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗ ತೊಡಗಿದ್ದು, ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೆ ಐವರಲ್ಲಿ ಸೋಂಕು ಪತ್ತೆಯಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಸಾಗರದಲ್ಲಿ ಇಬ್ಬರು ಹಾಗೂ ತೀರ್ಥಹಳ್ಳಿಯಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 8 ಮಂದಿಗೆ ಸೋಂಕು ತಗುಲಿರುವುದು ಖಚಿತಗೊಂಡಿದೆ. ವರ್ಷದ ಆರಂಭದಲ್ಲೇ ಈ ಕಾಯಿಲೆ ಮೊದಲ ಬಲಿ ಪಡೆದಿದ್ದು, ಮಲೆನಾಡು ಭಾಗದಲ್ಲಿ ಆತಂಕ ಸೃಷ್ಟಿಸಿದೆ. 

ಮತ್ತೆ ಕಾಣಿಸಿಕೊಂಡಿದೆ ಮಹಾಮಾರಿ ಮಂಗನ ಕಾಯಿಲೆ : ಎಚ್ಚರ!...

ಇನ್ನು ತೀವ್ರ ಜ್ವರ ಹಾಗೂ ಬಳಲಿಕೆಯಿಂದ ಬಳಲುತ್ತಿದ್ದ ಸಾಗರ ತಾಲೂಕಿನ ಅರಳಗೋಡು ಸಮೀಪದ ಹೆಗರೆ ಗ್ರಾಮದ ಜ್ಯೋತಿ ಎಂಬುವರು ಮಂಗನ ಕಾಯಿಲೆ (ಕೆಎಫ್‌ಡಿ) ಶಂಕೆ ಹಿನ್ನೆಲೆಯಲ್ಲಿ ಸೋಮವಾರ ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಿವಮೊಗ್ಗ : ಮಂಗ​ನ ​ಕಾ​ಯಿ​ಲೆಗೆ ಮಹಿಳೆ ಬಲಿ.

ಜ್ಯೋತಿ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದು, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.