ಬೇಗೂರು ಕೆರೆ ವ್ಯಾಪ್ತಿಯಲ್ಲಿ 81 ಒತ್ತುವರಿ, ಹೈಕೋರ್ಚ್‌ಗೆ ಬಿಬಿಎಂಪಿ ಮಾಹಿತಿ

 ಬೇಗೂರು ಕೆರೆ ವ್ಯಾಪ್ತಿಯಲ್ಲಿ 81  ಒತ್ತುವರಿಗಳ ಪೈಕಿ ಈಗಾಗಲೇ   33 ಒತ್ತುವರಿ ತೆರವುಗೊಳಿಸಿದ್ದಾಗಿ ಹೈಕೋರ್ಚ್‌ಗೆ ಬಿಬಿಎಂಪಿ ಮಾಹಿತಿ ನೀಡಿದೆ.

81 encroachment found in Begur lake area 33 have been removed BBMP tells High Court gow

ಬೆಂಗಳೂರು (ಆ.2): ನಗರದ ಬೇಗೂರು ಕೆರೆ ಪ್ರದೇಶದಲ್ಲಿ ಪತ್ತೆಯಾಗಿರುವ ಒಟ್ಟು 81 ಒತ್ತುವರಿಗಳ ಪೈಕಿ ಈಗಾಗಲೇ 33 ಒತ್ತುವರಿ ತೆರವು ಮಾಡಲಾಗಿದೆ ಎಂದು ಬಿಬಿಎಂಪಿ ಹೈಕೋರ್ಚ್‌ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಬೆಂಗಳೂರಿನ ಕೆರೆಗಳ ನಿರ್ವಹಣೆ ಹಾಗೂ ಸಂರಕ್ಷಣೆ ಸಂಬಂಧ 2014ರಲ್ಲಿ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಬೇಗೂರು ಮತ್ತು ಸುಬ್ರಹ್ಮಣ್ಯಪುರ ಕೆರೆಗಳ ನಿರ್ವಹಣೆ ಉಸ್ತುವಾರಿ ಹೊತ್ತಿರುವ ಬಿಬಿಎಂಪಿ ದಕ್ಷಿಣ ವಲಯ ಕಾರ್ಯ ನಿರ್ವಾಹಕ ಎಂಜಿನಿಯರ್‌ ಸಲ್ಲಿಸಿರುವ ಪ್ರಮಾಣ ಪತ್ರವನ್ನು ಪಾಲಿಕೆ ವಕೀಲರು ನ್ಯಾಯಪೀಠಕ್ಕೆ ಒದಗಿಸಿದರು. ಪ್ರಮಾಣ ಪತ್ರ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು. ಹೈಕೋರ್ಚ್‌ ನಿರ್ದೇಶನದಂತೆ ಬೇಗೂರು ಕೆರೆ ಪ್ರದೇಶದ ಸರ್ವೇಯನ್ನು ಜುಲೈ 26ರಂದು ಪೂರ್ಣಗೊಳಿಸಿದ್ದು, ಎಲ್ಲ ಒತ್ತುವರಿದಾರರಿಗೆ ಜುಲೈ 27ರಂದು ನೋಟಿಸ್‌ ಜಾರಿಗೊಳಿಸಲಾಗಿದೆ. 81 ಒತ್ತುವರಿಗಳ ಪೈಕಿ 33 ಒತ್ತುವರಿ ತೆರವುಗೊಳಿಸಲಾಗಿದೆ. ಉಳಿದ 45 ಒತ್ತುವರಿದಾರರು ಒತ್ತುವರಿ ತೆರವಿಗೆ ಸಿವಿಲ್‌ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದಾರೆ. ಒತ್ತುವರಿದಾರರ ಅರ್ಜಿಗಳಿಗೆ ಈಗಾಗಲೇ ಆಕ್ಷೇಪಣೆ ಸಲ್ಲಿಸಲಾಗಿದೆ. ಅರ್ಜಿಗಳು ಸೆ.3ರಂದು ವಿಚಾರಣೆಗೆ ಬರಲಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಒತ್ತುವರಿ ತೆರವಿಗೆ ಬಿಬಿಎಂಪಿ ಕಾಲಹರಣ ಮಾಡುತ್ತಿದೆ : ಎಚ್‌ಡಿಕೆ
ರಾಜಕಾಲುವೆ, ಉಪಕಾಲುವೆಗಳನ್ನು ಒತ್ತುವರಿ ಮಾಡಿ ಪ್ರವಾಹಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ, ಕೆಲ ರಾಜಕಾರಣಿಗಳನ್ನು ಮೆಚ್ಚಿಸಲು ಬಿಬಿಎಂಪಿ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ದಾರಿಯ ಜಾಗ ಒತ್ತುವರಿ ಮಾಡಿ ಮಸೀದಿ ನಿರ್ಮಾಣ, BBMP ನೋಟಿಸ್‌

ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿ, ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅದನ್ನು ಹೊರತುಪಡಿಸಿ ಬರೀ ಹೇಳಿಕೆಗಳಿಂದ ಉಪಯೋಗ ಇಲ್ಲ. ಮೊದಲು ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರಿಗೆ ಚಾಟಿ ನೀಡಬೇಕು. ಮಳೆ ಅನಾಹುತ ಬೆಂಗಳೂರು ಒಂದೇ ಕಡೆ ಅಲ್ಲ. ರಾಜ್ಯದ ಎಲ್ಲೆಡೆ ಆಗಿದೆ. ಸಾರ್ವಜನಿಕರಿಗೆ ಅನಾನುಕೂಲ ಆಗುವ ಪರಿಸ್ಥಿತಿ ಬಂದಿದೆ. ಮುಖ್ಯಮಂತ್ರಿಗಳು ಸಭೆ ನಡೆಸಿದ್ದು, ಇಂತಹ ಸಭೆಗಳಿಂದ ಏನು ಉಪಯೋಗ? ಅನೇಕ ಬಲಿಷ್ಠರು ರಾಜಕಾಲುವೆ, ಉಪಕಾಲುವೆ ಮುಚ್ಚಿ ಅರಮನೆಗಳನ್ನು ಕಟ್ಟಿಕೊಂಡಿದ್ದಾರೆ. ಕೆರೆಗಳನ್ನು ನುಂಗಿ ಹಾಕಿದ್ದಾರೆ. ಈ ರೀತಿ ಜಲಾವೃತ ಆಗಲು ಇಂತಹ ದುರಾಸೆ ಕಾರಣ ಎಂದು ಕಿಡಿಕಾರಿದರು.

ಫುಟ್‌ಪಾತನ್ನು ಒಂದು ಬಾರಿ ತೆರವುಗೊಳಿಸಿ ಸುಮ್ಮನಿರಬೇಡಿ: ತುಷಾರ್‌ ಸೂಚನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಟಿ ರೌಂಡ್‌್ಸ ಮಾಡಿದರು. ಏನಾದರೂ ಸಂದೇಶ ಕೊಟ್ಟರೇ? ಅದರಿಂದ ಬಂದ ಫಲಶೃತಿ ಏನು? ಯಾವುದಾದರೂ ಪರಿಹಾರ ಕೊಟ್ಟರಾ ಮುಖ್ಯಮಂತ್ರಿಗಳು? ಮುಂದೆ ಅವರು ಬೆಂಗಳೂರು ಜನರಿಗೆ ಏನು ಕೊಡುತ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದರು. ಈ ವೇಳೆ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ವೆಂಕಟರಾವ್‌ ನಾಡಗೌಡ, ಎನ್‌.ಎಂ.ನಬಿ ಇತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios